ಬೆಂಗಳೂರು : ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಉಮೇಶ್ ಕತ್ತಿ ಸಿಹಿಸುದ್ದಿ ನೀಡಿದದು, ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.
BREAKING NEWS : ಬೆಳಗಾವಿಯಲ್ಲಿ ಚಿರತೆ ಪ್ರತ್ಯೇಕ್ಷ : ಇಂದೂ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ವಿಧಾನಸೌಧದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಚಿವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ಗೆ 1.5 ಲಕ್ಷ ಹೊಸ ಅರ್ಜಿ ಸ್ವೀಕರಿಸಲಾಗಿದೆ. ಹೊಸ ಕಾರ್ಡುದಾರರಿಗೆ ಪಡಿತರ ವಿತರಿಸಿದಲ್ಲಿ ಸರ್ಕಾರಕ್ಕೆ ಆಗುವ ಹೆಚ್ಚುವರಿ ಹೊರೆ ಬಗ್ಗೆ ಚರ್ಚೆಯಾಗಿದೆ. ಹೊಸ ಬಿಪಿಎಲ್ ಕಾರ್ಡ್ ವಿತರಿಸುವ ಕುರಿತಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಪ್ಪಿಗೆ ಬಂದ ಕೂಡಲೇ ಕಾರ್ಡ್ ವಿತರಿಸುತ್ತೇವೆ ಎಂದು ತಿಳಿಸಿದ್ದಾರೆ.
BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಶೂ, ಸಾಕ್ಸ್ ವಿತರಿಸಲು 132 ಕೋಟಿ ರೂ. ಬಿಡುಗಡೆ
ಇನ್ನು ರಾಜ್ಯದಲ್ಲಿ 2.69 ಲಕ್ಷ ಬಿಪಿಎಲ್ ಕಾರ್ಡ್ ರದ್ದಾಗಿದೆ. ಅನರ್ಹರು ಹೊಂದಿದ್ದ ಬಿಪಿಎಲ್ ಕಾರ್ಡ್ ಪತ್ತೆ ಮಾಡಿ ರದ್ದುಮಾಡಲಾಗಿದೆ. ಆದಾಯ ತೆರಿಗೆ ಪಾವತಿಸುವ 85 ಸಾವಿರ ಮಂದಿ, 22 ಸಾವಿರ ಸರ್ಕಾರಿ ನೌಕರರು, 2.18 ಲಕ್ಷ ಮಂದಿ ಮೂರು ಹೆಕ್ಟರ್ ಗಿಂತ ಹೆಚ್ಚು ಜಮೀನು ಹೊಂದಿರುವವರು ಬಿಪಿಎಲ್ ಕಾರ್ಡ್ ಹೊಂದಿದವರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.