ಮಡಿಕೇರಿ : ಪ್ರಸಕ್ತ(2022-23) ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಯೋಜನೆಗಳು, ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆ ಈ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
BIGG NEWS : ಜೀವನ್ ಪ್ರಮಾಣ ಪತ್ರ : ಅಂಗವಿಕಲರು, ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ವೆಬ್ಸೈಟ್ https://suvidha.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ಯೋಜನೆಗಳ ಹೆಚ್ಚಿನ ಮಾಹಿತಿಯನ್ನು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ https://adcl.karnataka.gov.in, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ https://adijambava.karnataka.gov.in, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ: https://www.kbdc.karnataka.gov.in, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ https://ksskdc.kar.nic.in, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ https://banjarathanda.kar.nic.in/ಪಡೆಯಬಹುದು.
ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾಂಶದ ವೆಬ್ಸೈಟ್ ವಿಳಾಸ https://suvidha.karnataka.gov.in ಮೂಲಕ ಅಪ್ಲೋಡ್ ಮಾಡಿ ಅರ್ಜಿಯನ್ನು ಆಗಸ್ಟ್, 20 ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.