ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು5159 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.
BIGG NEWS : ಇನ್ಮುಂದೆ ರಾತ್ರಿಯೂ ‘ರಾಷ್ಟ್ರಧ್ವಜ’ ಹಾರಿಸಬಹುದು : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
2022-23ರ ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡುವವರಿಗೆ ಅಥವ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ 5,078 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರದ ಅನುಮತಿ ನೀಡಲಾಗಿರುತ್ತದೆ.
Yashaswini Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ಅಕ್ಟೋಬರ್ ನಲ್ಲಿ `ಯಶಸ್ವಿನಿ ಯೋಜನೆ’ ಮರು ಜಾರಿ
ಇನ್ನು ಸರ್ಕಾರಿ ಪ್ರೌಢಶಾಲೆಗಳಲ್ಲಿನ ವಿಷಯ ಶಿಕ್ಷಕರ ಖಾಲಿ ಹುದ್ದೆಗಳಿಗೆದುರಾಗಿ ಒಟ್ಟು1000 ಹೆಚ್ಚುವರಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅನುಮತಿ ನೀಡಲಾಗಿರುತ್ತದೆ. ಈ ಮೇಲಿನ ಅಂಶಗಳನ್ನು ಪರಿಗಣಿಸಿ ಇಲಾಖೆಯನಿಯಮಗಳು ಹಾಗೂ ಸುತ್ತೋಲೆಗಳ ಮಾರ್ಗದರ್ಶನದಡಿ ಒಟ್ಟು 5,159 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳು ಸರ್ಕಾರದ ಸಹಮತಿಯಂತೆ ಪತ್ರದಲ್ಲಿ ವಿಧಿಸಿರುವ ಷರತ್ತುಗಳನ್ನೊಳಗೊಂಡಂತೆ ತಾಲೂಕುಗಳಿಗೆ ಅತಿಥಿ ಶಿಕ್ಷಕರನ್ನು ಹಂಚಿಕೆಮಾಡಿ ಅನುಮತಿನೀಡಲಾಗಿದೆ.