ಬೆಂಗಳೂರು : ಸಾರಿಗೆ ನೌಖರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಕೆಎಸ್ ಆರ್ ಟಿಸಿ ಸೇರಿದಂತೆ ರಾಜ್ಯದ ಎಲ್ಲಾ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
BIGG NEWS : `ಕಲ್ಯಾಣ ಕರ್ನಾಟಕ’ ವಿಮೋಚನೆಗಿಂದು 75 ವರ್ಷ : ಅಮೃತಮಹೋತ್ಸವ ಕಾರ್ಯಕ್ರಮಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಬಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು ಅವರು, ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ಬದ್ಧವಾಗಿದೆ. ಈ ಕುರಿತು ಮುಖ್ಯಮಂತ್ರಿಯವರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಸಾರಿಗೆ ಇಲಾಖೆಯ ಪುನಶ್ಚೇತನಕ್ಕಾಗಿ ರಚಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಏಕ ಸದಸ್ಯ ಸಮಿತಿಯು ಈಗಾಗಲೇ ವರದಿ ಸಲ್ಲಿಸಿದ್ದು, ವರದಿ ಪರಿಶೀಲನೆಯಲ್ಲಿದೆ. ಶೀಘ್ರವೇ ವೇತನ ಪರಿಷ್ಕರಣೆಗೆ ಇಲಾಖೆ ಕ್ರಮ ವಹಿಸಲಿದೆ ಎಂದು ಹೇಳಿದ್ದಾರೆ.