ಬೆಂಗಳೂರು : ನೇಕಾರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ನೇಕಾರ ಸಮ್ಮಾನ್ ಯೋಜನೆಗೆ ಚಾಲನೆ ನೀಡಲಿದ್ದಾರೆ.
BIGG NEWS : ಆರೋಪಿಗಳ ಸುಳಿವು ನೀಡಿದ್ರೆ ಇನ್ಮುಂದೆ 5 ಲಕ್ಷ ರೂ.ವರೆಗೆ ಬಹುಮಾನ!
ಈ ಕುರಿತು ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾಹಿತಿ ನೀಡಿದ್ದು, ಕೈಮಗ್ಗ ನೇಕಾರರಿಗೆ ತಲಾ 5,000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆ ಡಿಸೆಂಬರ್ 16 ರ ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಕೈಮಗ್ಗ ನೇಕಾರರ ಚಟುವಟಿಕೆಗಳ ಪಾರಂಪರಿಕ ಕಲೆ ಮತ್ತು ಅವರ ಶ್ರಮವನ್ನು ಪರಿಗಣಿಸಿ ಹಾಗೂ ಕೋವಿಡ್-19 ಮಹಾಮಾರಿ ಮತ್ತು ಆರ್ಥಿಕ ಹಿನ್ನೆಡೆಯಿಂದ ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ 2020-21 ನೇ ಸಾಲಿನಿಂದ ಅನ್ವಯವಾಗುವಂತೆ, ‘ನೇಕಾರ ಸಮ್ಮಾನ್’ ಎಂಬ ಹೊಸ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದು, ಇದು ಕೈಮಗ್ಗ ನೇಕಾರರಿಗೆ ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಇಂದು ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ ಮುಖಾಂತರ ಪ್ರತಿ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು 5,000 ರೂ. ಗಳಂತೆ ಒಟ್ಟು 2343.20 ರೂ. ನೇಕಾರರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ.
BIGG NEWS : ಜೀವಂತ ಪ್ರಮಾಣ ಪತ್ರ : ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ