ಹೊಸಪೇಟೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2022-23ನೇ ಸಾಲಿನ ಕಿರುಸಾಲ ಮತ್ತು ಉದ್ಯೋಗಿನಿ (ಮಹಿಳೆಯರಿಗೆ ಸ್ವ-ಉದ್ಯೋಗಕ್ಕಾಗಿ ಬ್ಯಾಂಕ್ಗಳ ಮೂಲಕ ಸಾಲ ಪಡೆಯುವ) ಯೋಜನೆಯಡಿಯಲ್ಲಿ ಎಲ್ಲಾ ಜಾತಿಯ ಮಹಿಳಾ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹೊಸಪೆಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIGG NEWS : ಹರ್ ಘರ್ ತಿರಂಗಾ ಅಭಿಯಾನ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ
ಉದ್ಯೋಗಿನಿ ಯೋಜನೆಯಲ್ಲಿ ಉದ್ಯೋಗ ಮಾಡುವ ಅರ್ಹ ಫಲಾನುಭವಿಗಳಿಗೆ ಸಾಲ ನೀಡುವ ಯೋಜನೆಯಾಗಿದ್ದು, ಉದ್ಯೋಗಿನಿ ಯೋಜನೆಗೆ-4 ಮತ್ತು ಕಿರುಸಾಲಕ್ಕೆ -1 ಗುರಿಗಳನ್ನು ನಿಗಧಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಫಲಾನುಭವಿಗಳು ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು, ಆಸಕ್ತರು ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನೆ ಕಚೇರಿಯಲ್ಲಿ ಪಡೆದು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೆ ಕಚೇರಿಗೆ ಆ.12ರೊಳಗಾಗಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
BIGG NEWS : ಚಿಕ್ಕಮಗಳೂರಿನಲ್ಲಿ ‘ ಹೈಅಲರ್ಟ್ ಘೋಷಣೆ ‘ : ಪ್ರವಾಸಿಗರು, ಹೊರ ಜಿಲ್ಲಾ ವಾಹನಗಳ ಪರಿಶೀಲನೆ
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹೊಸಪೇಟೆ ಇವರಿಗೆ ಸಂಪರ್ಕಿಸಬಹುದಾಗಿದೆ.