ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಹೌದು, ಸರ್ಕಾರ ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ. 3500 ಕಾನ್ಸ್ ಟೇಬಲ್ ಹಾಗೂ 615 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ವಿವಿಧ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರವೇ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆಯಿದೆ.
ಕಾನ್ಸೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ವರ್ಷ ಪೂರ್ಣಗೊಂಡಿರಬೇಕು. 25 ವರ್ಷ ಮೀರಿರಬಾರದು. ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಈ ಮೂಲಕ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.
ಹುದ್ದೆಗಳ ವಿವರ
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್ / ಡಿಎಆರ್) 2000
ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (SRPC ) (KSRP) -1500
ಪೊಲೀಸ್ ಸಬ್‌ಇನ್ಸ್‌ಪೆಕ್ಟರ್-300
ಪೊಲೀಸ್ ಸಬ್‌ಇನ್ಸ್‌ಪೆಕ್ಟರ್-300
ಡೆಪ್ಯೂಟಿ ಸಬ್ ಇನ್ಸ್‌ಪೆಕ್ಟರ್-15