Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯಾದ್ಯಂತ ಇಂದು ಬಿರುಗಾಳಿ ಸಹಿತ ಆಲಿಕಲ್ಲು ಮಳೆ : 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

24/03/2026 11:02 AM

ಪೆಸಿಫಿಕ್ ಸಾಗರದಲ್ಲಿ ಭೀಕರ ಭೂಕಂಪ: ಟೊಂಗಾದಲ್ಲಿ 7.6 ತೀವ್ರತೆಯ ಕಂಪನ; ಸುನಾಮಿ ಭೀತಿ | Earthquake

24/03/2026 11:01 AM

ಎಚ್‌ಡಿಎಫ್‌ಸಿ ಬ್ಯಾಂಕ್ ಅಧ್ಯಕ್ಷರ ದಿಢೀರ್ ನಿರ್ಗಮನ: ತನಿಖೆಗೆ ಹೊರಗಿನ ಕಾನೂನು ಸಂಸ್ಥೆಗಳನ್ನು ನೇಮಿಸಿದ ಬ್ಯಾಂಕ್!

24/03/2026 10:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಜನೆವರಿ, ಫೆಬ್ರವರಿ ತಿಂಗಳ ‘ಗೃಹಲಕ್ಷ್ಮೀ’ ಹಣ ಸದ್ಯದಲ್ಲೇ ಖಾತೆಗೆ ಜಮೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
KARNATAKA

GOOD NEWS : ಜನೆವರಿ, ಫೆಬ್ರವರಿ ತಿಂಗಳ ‘ಗೃಹಲಕ್ಷ್ಮೀ’ ಹಣ ಸದ್ಯದಲ್ಲೇ ಖಾತೆಗೆ ಜಮೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

By kannadanewsnow0507/03/2025 2:04 PM

ಬೆಂಗಳೂರು : ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ರಾಜ್ಯದ ಯಜಮಾನಿಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಒಂದು ತಿಂಗಳ ಗೃಹಲಕ್ಷ್ಮಿ ಹಣ ಖಾತಿಗೆ ಜಮೆ ಆಗಿತ್ತು. ಇದೀಗ ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ, ಜನೆವರಿ ಮತ್ತು ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರ ಖಾತೆಗೆ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೇ; ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ; ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅನುದಾನ ಸರಿಯಾಗಿ ಸದ್ಭಳಕೆ

ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್‌ ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌, ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿಯಲ್ಲಿ ಇತ್ತು. ಆದರೆ, ಈಗ ಬಹುದೊಡ್ಡ ಗಾತ್ರದ ಬಜೆಟ್‌ನ್ನು ಒಳಗೊಂಡಂತಹ ಇಲಾಖೆಯಾಗಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆ ಬಂದಿರುವುದರಿಂದ ಒಂದು ವರ್ಷಕ್ಕೆ ಸುಮಾರು ೩೨ ಸಾವಿರ ಕೋಟಿ ರೂಪಾಯಿಯಷ್ಟು ಹಣವನ್ನು ಗೃಹಲಕ್ಷ್ಮೀಯವರಿಗೆ ನೀಡಲಾಗುತ್ತಿದೆ. ನಮ್ಮ ಇಲಾಖೆಗೆ ನೀಡಿದ ಅನುದಾನ ಪೈಕಿ ಯಾವುದೇ ಅನುದಾನ ಉಳಿದಿಲ್ಲ. ಎಲ್ಲವೂ ಸರಿಯಾದ ರೀತಿಯಲ್ಲಿ ಖರ್ಚಾಗಿದೆ. ಶೇಕಡ ೧೦ರಷ್ಟು ಮಾತ್ರ ಅನುದಾನ ಮಿಕ್ಕಿರಬಹುದು. ಅದು ಕೂಡ ಮಾರ್ಚ್‌ ೩೧ರೊಳಗೆ ಖರ್ಚಾಗಲಿದೆ ಎಂದು ಸಚಿವರು ಹೇಳಿದರು.

ಸದ್ಯದಲ್ಲೇ ಜನವರಿ, ಫೆಬ್ರವರಿಯದು ಕ್ಲಿಯರ್‌

ಗೃಹಲಕ್ಷ್ಮೀ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು. ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ನವೆಂಬರ್‌, ಡಿಸೆಂಬರ್‌ ತಿಂಗಳ ಹಣ ಕ್ಲೀಯರ್‌ ಆಗಿದೆ. ಜನವರಿ, ಫೆಬ್ರವರಿ ಸದ್ಯದಲ್ಲೇ ಕ್ಲಿಯರ್‌ ಆಗಲಿದೆ. ಹತ್ತ-ಹದಿನೈದು ದಿನ ಹೆಚ್ಚುಕಡಿಮೆ ಆಗಬಹುದೇನೋ ವಿನಃ ಯಾವುದೇ ಕಾರಣಕ್ಕೂ ಕ್ಲಿಯರ್‌ ಆಗದೇ ಉಳಿಯುವುದಿಲ್ಲ ಎಂದು ಹೇಳಿದರು.

 ಮಹಾರಾಷ್ಟ್ರದಲ್ಲಿ ಯೋಜನೆ ಸ್ಥಬ್ಧ

ನಮ್ಮ ನೆರೆಯ ಮಹಾರಾಷ್ಟ್ರ ರಾಜ್ಯವನ್ನು ನೋಡಿ, ಅಲ್ಲಿ ಚುನಾವಣೆಗೆ ಮುನ್ನ ಎರಡು ತಿಂಗಳ ದುಡ್ಡನ್ನು ಹಾಕಿದರು. ಅಲ್ಲಿನ ʻಮಾಝಿ ಲಡಕಿ ಬಹಿನ್‌ʼ ಯೋಜನೆಗೆ ಹಣನೇ ಇಲ್ಲ. ಇಲ್ಲಿ ನಮ್ಮನ್ನು ಮಾತ್ರ ಬಿಜೆಪಿಯವರು ದೊಡ್ಡದಾಗಿ ಪ್ರಶ್ನೆ ಮಾಡುತ್ತಾರೆಂದು ಖಾರವಾಗಿ ಹೇಳಿದ ಸಚಿವರು, ನಮ್ಮ ಕರ್ನಾಟಕದಲ್ಲೇ ಗೃಹಲಕ್ಷ್ಮೀ ಹಣ ಸರಿಯಾಗಿ ತಲುಪಿಸುತ್ತಿರುವುದು. ಅದೇ ಮಹಾರಾಷ್ಟ್ರದಲ್ಲಿ ಚುನಾವಣೆಗಿಂತ ಮುಂಚೆ ಅಷ್ಟೇ ಹಾಕಿದ್ದರು. ಆದರೆ, ಚುನಾವಣೆ ನಂತರ ಯೋಜನೆ ಜಾರಿಗೊಳ್ಳದೆ ನಿಂತಿದೆ ಎಂದರು.

 ಸಿಎಂ ಅವರಿಗೆ ಅಭಿನಂದನೆ

ಸಿಎಂ ಸಿದ್ದರಾಮಯ್ಯನವರದು ಇದು ಕೊನೆಯ ಬಜೆಟ್‌ ಎಂದೆಲ್ಲ ಬಿಜೆಪಿಯವರು ಹೇಳುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನಂತೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇನೆ; ೧೬ನೇ ದಾಖಲೆ ಬಜೆಟ್‌ ಮಂಡಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲರನ್ನೂ ಒಳಗೊಂಡ ಸಮಗ್ರವಾದ ಬಜೆಟ್‌ ಮಾಡುತ್ತಿರುವುದು ವಿಶೇಷ ಎಂದು ಸಚಿವರು ತಿಳಿಸಿದರು.

ಎಲ್ಲವೂ ಹೈಕಮಾಂಡ್‌ ತೀರ್ಮಾನ

ಸದ್ಯದಲ್ಲೇ ಸಂಪುಟ ಪುನರ್‌ ರಚನೆ ಆಗಲಿದೆ; ಇದು ಕೆಲ ಸಚಿವರಿಗೆ ಕೊನೆಯ ಬಜೆಟ್‌ ಎಂದೆಲ್ಲ ಹೇಳುತ್ತಿದ್ದಾರೆಂಬ ಸುದ್ದಿಗಾರರ ಪ್ರಶ್ನೆಗೆ ಸಚಿವರು, ಈವೊಂದು ಒಳ್ಳೆಯ ಸಂದರ್ಭದಲ್ಲಿ ಏನನ್ನೂ ಮಾತನಾಡಲು ಹೋಗುವುದಿಲ್ಲ. ಏಕೆಂದರೆ, ನಮ್ಮ ಕಾಂಗ್ರೆಸ್‌ ಪಕ್ಷದಲ್ಲಿ ಒಂದು ಶಿಸ್ತು ಇದೆ. ಏನೇ ಚರ್ಚೆ, ತೀರ್ಮಾನಗಳಿದ್ದರೂ ಅದನ್ನು ಹೈಕಮಾಂಡ್‌ ಮಾಡುತ್ತದೆ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

Rain Alert : ರಾಜ್ಯಾದ್ಯಂತ ಇಂದು ಬಿರುಗಾಳಿ ಸಹಿತ ಆಲಿಕಲ್ಲು ಮಳೆ : 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

24/03/2026 11:02 AM1 Min Read

ALERT : `ತಂದೂರಿ ರೊಟ್ಟಿ’ ತಿನ್ನುವುದರಿಂದ ಹೃದಯಾಘಾತದ ಅಪಾಯ ಹೆಚ್ಚು !

24/03/2026 10:53 AM1 Min Read

ಈ ಕಾಯಿಲೆಗಳಿಗೆ ರಾಮಬಾಣ ಪಪ್ಪಾಯಿ ಎಲೆಯ ರಸ: ಇಲ್ಲಿದೆ ಇದರ ಅದ್ಭುತ ಪ್ರಯೋಜನಗಳ ಮಾಹಿತಿ

24/03/2026 10:43 AM1 Min Read
Recent News

Rain Alert : ರಾಜ್ಯಾದ್ಯಂತ ಇಂದು ಬಿರುಗಾಳಿ ಸಹಿತ ಆಲಿಕಲ್ಲು ಮಳೆ : 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

24/03/2026 11:02 AM

ಪೆಸಿಫಿಕ್ ಸಾಗರದಲ್ಲಿ ಭೀಕರ ಭೂಕಂಪ: ಟೊಂಗಾದಲ್ಲಿ 7.6 ತೀವ್ರತೆಯ ಕಂಪನ; ಸುನಾಮಿ ಭೀತಿ | Earthquake

24/03/2026 11:01 AM

ಎಚ್‌ಡಿಎಫ್‌ಸಿ ಬ್ಯಾಂಕ್ ಅಧ್ಯಕ್ಷರ ದಿಢೀರ್ ನಿರ್ಗಮನ: ತನಿಖೆಗೆ ಹೊರಗಿನ ಕಾನೂನು ಸಂಸ್ಥೆಗಳನ್ನು ನೇಮಿಸಿದ ಬ್ಯಾಂಕ್!

24/03/2026 10:56 AM

ALERT : `ತಂದೂರಿ ರೊಟ್ಟಿ’ ತಿನ್ನುವುದರಿಂದ ಹೃದಯಾಘಾತದ ಅಪಾಯ ಹೆಚ್ಚು !

24/03/2026 10:53 AM
State News
KARNATAKA

Rain Alert : ರಾಜ್ಯಾದ್ಯಂತ ಇಂದು ಬಿರುಗಾಳಿ ಸಹಿತ ಆಲಿಕಲ್ಲು ಮಳೆ : 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5724/03/2026 11:02 AM KARNATAKA 1 Min Read

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಒಟ್ಟು 17 ಜಿಲ್ಲೆಗಳಿಗೆ…

ALERT : `ತಂದೂರಿ ರೊಟ್ಟಿ’ ತಿನ್ನುವುದರಿಂದ ಹೃದಯಾಘಾತದ ಅಪಾಯ ಹೆಚ್ಚು !

24/03/2026 10:53 AM

ಈ ಕಾಯಿಲೆಗಳಿಗೆ ರಾಮಬಾಣ ಪಪ್ಪಾಯಿ ಎಲೆಯ ರಸ: ಇಲ್ಲಿದೆ ಇದರ ಅದ್ಭುತ ಪ್ರಯೋಜನಗಳ ಮಾಹಿತಿ

24/03/2026 10:43 AM

BREAKING : ಬೀದರ್ ನಲ್ಲಿ ‘MBBS’ ವಿದ್ಯಾರ್ಥಿ ಆತ್ಮಹತ್ಯೆ !

24/03/2026 10:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.