ಬೆಳಗಾವಿ : ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣವನ್ನು ರಾಜ್ಯದ ಯಜಮಾನೀಯರ ಖಾತೆಗೆ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು.
ಇಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇನ್ನೊಂದು ವಾರದಲ್ಲಿ ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗುತ್ತದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಭರವಸೆ ಕೊಟ್ಟಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದರು.