ಬೆಂಗಳೂರು : ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್ ಯೋಜನೆಯಡಿ 5 ಕ್ರಿಟಿಕಲ್ ಕೇರ್ ಬ್ಲಾಕ್‌ಗೆ ಅಗತ್ಯ ಇರುವ 168 ಸಿಬ್ಬಂದಿ ನೇಮಕಕ್ಕೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.
ವಿಜಯಪುರ (100 ಹಾಸಿಗೆ), ತುಮಕೂರು (100 ಹಾಸಿಗೆ), ಕೋಲಾರ (50 ಹಾಸಿಗೆ), ಉಡುಪಿ (50 ಹಾಸಿಗೆ) ಮತ್ತು ಬೆಂಗಳೂರಿನ ಸಿ.ವಿ.ರಾಮನ್ ಆಸ್ಪತ್ರೆ (100 ಹಾಸಿಗೆ)ಗಳ ಕ್ರಿಟಿಕಲ್ ಕೇರ್ ಬ್ಲಾಕ್‌ಗಳು ಕಾರ್ಯನಿರ್ವಹಿಸುವಂತೆ ಮಾಡಲು ಸಿಬ್ಬಂದಿ ಅಗತ್ಯವಿದೆ. ಕ್ರಿಟಿಕಲ್ ಕೇರ್ ಬ್ಲಾಕ್‌ಗಳಿಗೆ ಅಗತ್ಯ ಇರುವ ಶಸ್ತ್ರಚಿಕಿತ್ಸಕರು, ಫಿಜಿಷಿಯನ್, ವಿಕಿರಣಶಾಸ್ತ್ರಜ್ಞ, ಶುಶೂಷಕರು, ಗ್ರೂಪ್ -ಡಿ ದರ್ಜೆ ಸೇರಿ ಎಂಟು ವಿಭಾಗಗಳ ಒಟ್ಟು 168 ನೌಕರರ ನೇಮಕಕ್ಕೆ ಅನುಮೋದನೆ ನೀಡಲಾಗಿದೆ.