ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ ಹಾಗೂ ಇತರೆ ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ) 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಸೇನಾ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ನಗರದಲ್ಲಿ ನೀಡುತ್ತಿದೆ.ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಯು 30 ಎಪ್ರಿಲ್ 2005 ರಿಂದ 29 ಎಪ್ರಿಲ್ 2008 ರ ನಡುವಿನ ಅವಧಿಯಲ್ಲಿ ಜನಸಿರಬೇಕು. ಅಭ್ಯರ್ಥಿಯ ವಯಸ್ಸನ್ನು 10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ 29 ಎಪ್ರಿಲ್ 2025 ಕ್ಕೆ ಅನ್ವಯಿಸುವಂತೆ ಪರಿಗಣಿಸಲಾಗುವುದು.
ತರಬೇತಿ ನೀಡುವ ಸ್ಥಳ: ಭಾರತೀಯ ಸೇನೆ, ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ತರಬೇತಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿರುವ ಸೇನಾ ಆಯ್ಕೆ ಪೂರ್ವ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು.
ಅರ್ಜಿ ನಮೂನೆಯನ್ನು ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆದು, ಭರ್ತಿ ಮಾಡಿ, ಜಿಲ್ಲಾ ಕಛೇರಿಯಲ್ಲಿಯೇ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ವೆಬ್‌ಸೈಟ್ https://bowd.karnataka.gov.in/ ನಲ್ಲಿಯೂ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 08539-221606 ಗೆ ಸಂಪರ್ಕಿಸುವಂತೆ ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.