ಬೆಂಗಳೂರು : ಅಕ್ರಮ-ಸಕ್ರಮ ಯೋಜನೆ ಕುರಿತು ನಾಳೆ ಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಯೋಜನೆಯ ಕರಡು ಅಧಿಸೂಚನೆ ಸಿದ್ಧವಾಗಿದ್ದು, ಈ ತಿಂಗಳ ಅಂತ್ಯದೊಳಗೆ ಕರಡು ಅಧಿಸೂಚನೆ ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಸಕ್ರಮ ಯೋಜನೆ ಸಂಬಂಧ ಬೆಂಗಳೂರಿನಲ್ಲಿ ತಡೆಯಾಜ್ಞೆ ಇರುವ ಕಾರಣ ಇಲ್ಲಿ ಜಾರಿಯಾಗುವುದಿಲ್ಲ. ಉಳಿದ ಮಹಾನಗರಗಳಿಗೆ ಸಂಬಂಧಿಸಿದ ಅಕ್ರಮ-ಸಕ್ರಮ ಯೋಜನೆ ಸಂಬಂಧ ಕರಡು ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಅಕ್ರಮ-ಸಕ್ರಮ ಯೋಜನೆ ಸಂಬಂಧ ಈಗಾಗಲೇ ಸಂಪುಟ ಉಪಸಮಿತಿ ಸಭೆ ಸೇರಿ ಸಾಕಷ್ಟು ಚರ್ಚಿಸಿದೆ. ಕೇವಲ ಮನೆಗಳನ್ನು ಮಾತ್ರ ಸಕ್ರಮ ಮಾಡಬೇಕೆ, ವಾಣಿಜ್ಯ ಕಟ್ಟಡಗಳನ್ನು ಸಕ್ರಮ ಮಾಡಬೇಕೆ ಎಂಬ ಬಗ್ಗೆ ಚರ್ಚೆ ನಡೆದಿದೆ. ಅಕ್ರಮ ಸಕ್ರಮಕ್ಕೆ ಕೊನೆಯ ದಿನಾಂಗ ನಿಗದಿಪಡಿಸುವುದು ಬೇಡ ಎಂಬ ಅಭಿಪ್ರಾಯಕ್ಕೆ ಬಂದಿದೆ. ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವ ಉದ್ದೇಶವಿದೆ ಎಂದು ಹೇಳಿದ್ದಾರೆ.

Share.
Exit mobile version