ಬೆಂಗಳೂರು : ರಾಜ್ಯದಲ್ಲಿ ನೂತನ ಕೈಗಾರಿಕೆ ನೀತಿ 2025 ರ ಜನವರಿಯಲ್ಲಿ ಜಾರಿಗೆ ಬರಲಿದ್ದು, ರಾಜ್ಯದೆಲ್ಲೆಡೆ ಉದ್ಯಮ ಸ್ಥಾಪಿಸಿ, ಉದ್ಯೋಗ ಸೃಷ್ಟಿಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದೆಲ್ಲೆಡೆ ಉದ್ಯಮ ಸ್ಥಾಪನೆ-ಉದ್ಯೋಗ ಸೃಷ್ಟಿ ಮಾಡಲಾಗುವುದು. ಮುಂದಿನ 5 ವರ್ಷಗಳ ಅವಧಿಯಲ್ಲಿ ರೂ. 7.5 ಲಕ್ಷ ಕೋಟಿ ಹೂಡಿಕೆ, 20ಲಕ್ಷ ನೂತನ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದ್ದಾರೆ.
ಬೆಳವಣಿಗೆ ಗುರಿ ಹೊಂದಲಾಗಿದೆ. 5 ವರ್ಷದಲ್ಲಿ 7.5 ಲಕ್ಷ ಕೋಟಿ ರೂ. ಬಂಡವಾಳದ ನಿರೀಕ್ಷೆ ಮಾಡಲಾಗುತ್ತಿದೆ. ಇದರಿಂದ 20 ಲಕ್ಷ ಉದ್ಯೋಗ ಸೃಷ್ಟಿಯಾಗಬಹುದೆಂದು ಅಂದಾಜು ಮಾಡಲಾಗಿದೆ. ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮತೋಲನ ಕಡೆಗಾಣಿಸುವ ಮಹತ್ವಕಾಂಕ್ಷೆ ಇದೆ. ಏಕಗವಾಕ್ಷಿ ಪದ್ಧತಿಯಲ್ಲಿ ಡಿಜಿಟಲೀಕರಣ ಉದ್ದೇಶವನ್ನು ಹೊಸ ನೀತಿ ಒಳಗೊಂಡಿದೆ.