ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಸ್ವಯಂ-ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರವಾಹಿನಿ/ ವಾಹಿನಿಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಸಿಇಟಿ ಹಾಗೂ ನೀಟ್ ಕೌನ್ಸೆಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು) ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದ ಅರ್ಹ ಫಲಾನುಭವಿಗಳು ಕರ್ನಾಟಕ ರಾಜ್ಯದವರಾಗಿದ್ದು, ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆದಿರಬೇಕು. ಮೊಬೈಲ್ ಸಂಖ್ಯೆಯು ಆಧಾರ್‌ಗೆ ಜೋಡಣಡಯಾಗಿರಬೇಕು ಹಾಗೂ ಆಧಾರ್ ಸಂಖ್ಯೆಯು ಬ್ಯಾಂಕ್ ಖಾತೆಗೆ ಸೀಡಿಂಗ್ ಆಗಿರಬೇಕು. ಫಲಾನುಭವಿಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಫಲಾನುಭವಿಗಳು ವೆಬ್‌ಸೈಟ್ http//kacdc.karnataka.gov.in ಮೂಲಕ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 94484 51111, ಜಿಲ್ಲಾ ವ್ಯವಸ್ಥಾಪಕರ ಕಛೇರಿಯ ಸಹಾಯವಾಣಿ ಸಂಖ್ಯೆ: 08539-221847ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.