ಬೆಂಗಳೂರು : ರಾಜ್ಯ ಸರ್ಕಾರವು ಪೋಷಕರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದ 4056 ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿ ಆರಂಭಕ್ಕೆ ಮಹತ್ವದ ಆದೇಶ ಹೊರಡಿಸಲಾಗಿದೆ.
ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಿರುವಂತೆ ರಾಜ್ಯದ ವಿವಿಧ ಜಿಲ್ಲೆಗಳ 4,056 ಸರ್ಕಾರಿ ಶಾಲೆಗಳಲ್ಲಿ 2025-26ನೇ ಸಾಲಿನಿಂದಲೇ ಪೂರ್ವ ಪ್ರಾಥಮಿಕ ತರಗತಿಗಳನ್ನು (ಎಲ್‌ಕೆಜಿ-ಯುಕೆಜಿ) ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
ರಾಜ್ಯದ 2619 ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿರುವ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅದರಂತೆ ರಾಜ್ಯದಲ್ಲಿ ಮತ್ತೆ ಹೊಸದಾಗಿ 4056 ಶಾಲೆಗಳಲ್ಲಿ ಈ ವರ್ಷದಿಂದಲೇ ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.








