Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ
KARNATAKA

GOOD NEWS : ರಾಜ್ಯದ ಕಲಾವಿದರ ಮಾಸಾಶನ ರೂ.2,000ದಿಂದ 2,500ಕ್ಕೆ ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ

By kannadanewsnow09

ಬೆಂಗಳೂರು: ಸಂಕಷ್ಟದಲ್ಲಿರುವಂತ ರಾಜ್ಯದ ಕಲಾವಿದರ ಮಾಸಾಶನವನ್ನು ಸರ್ಕಾರವು 2000 ರೂ.ನಿಂದ 2500 ರೂಪಾಯಿಗೆ ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕಷ್ಟಪರಿಸ್ಥಿತಿಯಲ್ಲಿರುವ ಸಾಹಿತಿ/ಕಲಾವಿದರ ಮಾಸಾಶನ ಹಾಗೂ ವಿಧವಾ ಮಾಸಾಶನ ಪಾವತಿ ಮಾಡಲು 2025-26ನೇ ಸಾಲಿನಲ್ಲಿ ಲೆಕ್ಕಶೀರ್ಷಿಕೆ: 2205-00-102-1-18-251ರಡಿ ಹಂಚಿಕೆ ಮಾಡಿರುವ ರೂ.4392.82 ಲಕ್ಷಗಳಲ್ಲಿ ಏಪ್ರಿಲ್-2025 ರಿಂದ ಜೂನ್-2025ರವರೆಗಿನ ಮೊದಲನೇ ಕಂತಿನ ಅನುದಾನ ರೂ.10,98,21,000/-ಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ.

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374 ರಲ್ಲಿನ ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಿರುತ್ತದೆ ಎಂದು ತಿಳಿಸಿದ್ದಾರೆ.

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ- 374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ಸರ್ಕಾರದ ತಾತ್ವಿಕ ಅನುಮೋದನೆ ನೀಡಲಾಗಿದೆ.

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374ರಲ್ಲಿ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ. ಗಳಿಂದ 2,500 ರೂ. ಗಳಿಗೆ ಹೆಚ್ಚಿಸಿ, ಮಾಸಾಶನಕ್ಕೆ ಬೇಕಾಗುವ ಒಟ್ಟಾರೆ ಮೊತ್ತವನ್ನು ಲೆಕ್ಕಶೀರ್ಷಿಕೆ: 2205-00-102-1-18-251ರಡಿ ರೂ.40,76,72,000/-ಗಳನ್ನು ಬಿಡುಗಡೆ ಮಾಡಲು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು ಕೋರಿರುತ್ತಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374ರಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ. ಗಳಿಂದ 2,500 ರೂ. ಕೈ ಹೆಚ್ಚಿಸಲು ಸರ್ಕಾರದ ಅನುಮೋದನೆ ನೀಡಿದೆ.

ಮುಂದುವರೆದು, ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಲೆಕ್ಕಶೀರ್ಷಿಕೆ: ರೂ.32,94,61,000/-(ರೂಪಾಯಿ ಮೂವತ್ತೆರಡು ಕೋಟಿ ತೊಂಬತ್ತಾಲ್ಕು ಲಕ್ಷದ ಅರವತ್ತೊಂದು ಸಾವಿರಗಳು ಮಾತ್ರಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಸರ್ಕಾರದ ಮಂಜೂರಾತಿ ನೀಡಿದೆ.

ಷರತ್ತುಗಳು:-

1. ಯಾವ ಉದ್ದೇಶಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸತಕ್ಕದ್ದು.
2, ಆದೇಶ ಹೊರಡಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
3. ಮಂಜೂರು ಮಾಡಿರುವ ಅನುದಾನ ಸಮರ್ಪಕವಾಗಿ ವೆಚ್ಚವಾಗಿರುವ ಬಗ್ಗೆ ಲೆಕ್ಕಪರಿಶೋಧಕರಿಂದ ದೃಢೀಕರಿಸಿದ ಲೆಕ್ಕಪಟ್ಟಿ ಹಾಗೂ ಹಣಬಳಕೆ ಪ್ರಮಾಣ ಪತ್ರವನ್ನು ಪಡೆದು ಸಲ್ಲಿಸುವುದು.
4. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ-1999 ಹಾಗೂ ನಿಯಮಗಳು-2000 ಅನ್ನು ಕಡ್ಡಾಯವಾಗಿ ಪಾಲಿಸುವುದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಆದೇಶ ಸಂಖ್ಯೆ: ಎಫ್‌. ಡಿ 01 ಟಿ.ಎಫ್.ಪಿ 2025, ದಿನಾಂಕ: 02.04.2025ರಲ್ಲಿ ಇಲಾಖಾ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಆರ್ಥಿಕ ಅಧಿಕಾರದನ್ವಯ ಹೊರಡಿಸಲಾಗಿದೆ.

BREAKING: 2026ರಿಂದ ಎರಡು ಬಾರಿ 10ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು CBSE ಅನುಮೋದನೆ | CBSE Class 10 Board Exams

ಈಗ ಚುನಾವಣೆ ನಡೆದ್ರೆ ‘ಕರ್ನಾಟಕ ಕಾಂಗ್ರೆಸ್’ಗೆ ಹೀನಾಯಾನ ಸೋಲು, ಬಿಜೆಪಿ ಸ್ಥಾನ ದ್ವಿಗುಣ: ಸಮೀಕ್ಷೆ

000 to Rs. 2 500: State government official order GOOD NEWS: Monthly stipend of state artists increased from Rs. 2
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

1 Min Read

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

2 Mins Read

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

2 Mins Read
Recent News

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

ಹರಡುತ್ತಿದೆ ಹಂತಾವೈರಸ್ ಭೀತಿ: ದೇಶಾದ್ಯಂತ ಹದ್ದಿನ ಕಣ್ಣಿಟ್ಟ ಭಾರತೀಯ ಆರೋಗ್ಯ ಸಂಸ್ಥೆಗಳು

State News
KARNATAKA

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

By kannadanewsnow09 KARNATAKA 1 Min Read

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಮಾರಿಕಾಂಬಾ ದೇವಸ್ಥಾನದ ತಿರುವಿನಲ್ಲಿ ಮರಗಳನ್ನು ತುಂಬಿದ್ದ ಲಾರಿ ಹಾಗೂ ಟಾಟಾ ಏಸ್ ನಡುವೆ…

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.