ಕೊಪ್ಪಳ : ಈ ವರ್ಷದ ಒಳಗಾಗಿ ತುಂಗಭದ್ರಾ ಜಲಾಶಯಕ್ಕೆ ನೂತನ ವಾದಂತಹ ಕ್ರಸ್ಟ್ ಗೇಟ್ ಅಳವಡಿಕೆ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ನಿನ್ನೆ ಕೊಪ್ಪಳ ಜಿಲ್ಲೆಯ ತಾಲೂಕಿನ ಮುನಿರಾಬಾದ್‌ನಲ್ಲಿ ನಡೆದ ಕ್ರಸ್ಟ್ ಗೇಟ್ ದುರಸ್ತಿಗೆ ಶ್ರಮಿಸಿದವರಿಗೆ ಸನ್ಮಾನಸಮಾರಂಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯಕ್ಕೆ ನೂತನ ಕ್ರಸ್ಚ್ ಗೇಟ್ ಅಳಡಿಸಲು ತಜ್ಞರ ಸಮಿತಿ ಶಿಫಾರಸು ಮಾಡಿರುವ ಹಿನ್ನೆಲೆ ವರ್ಷದೊಳಗಾಗಿಯೇ ಅಳವಡಿಸಲಾಗುವುದು ಎಂದರು.
ಆ. 10ರಂದು ಕ್ರಸ್ಟ್ ಗೇಟ್ ಮುರಿದು ಹೋಗಿದ್ದನ್ನು ರಾತ್ರಿಯೇ ಸಚಿವ ಶಿವರಾಜ ತಂಗಡಗಿ ಹಾಗೂ ಎಂಡಿ ಗಮನಕ್ಕೆ ತಂದಾಗ ನಾವು ನೀರು ಖಾಲಿಯಾದರೂ ಪರವಾಗಿಲ್ಲ ಜಲಾಶಯವನ್ನು ಕಾಪಾಡಿಕೊಳ್ಳಬೇಕು ಎಂದು ಚರ್ಚಿಸಿದ್ದೆವು.ಅದರಂತೆ ಮರುದಿನವೇ ಸ್ಥಳಕ್ಕೆ ಭೇಟಿ ನೀಡಿ, ಎಂಜಿನಿಯರ್ ಅವರೊಂದಿಗೆ ಚರ್ಚೆ ಮಾಡಿ, ದುರಸ್ತಿ ಕಾರ್ಯವನ್ನು ವಾರದೊಳಗೆ ಪೂರ್ಣಗೊಳಿಸಿದೆವು ಎಂದರು.