ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಹೊಸ ವರ್ಷಕ್ಕೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಹಿಳೆಯರಿಗೆ ಪ್ರತ್ಯೇಕ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ರಾಜ್ಯಾದ್ಯಮತ 250 ಆಯುಷ್ಮತಿ ಕ್ಲಿನಿಕ್ ಗಳಿಗೆ ಜನವರಿಯಲ್ಲಿ ಚಾಲನೆ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.
ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಮಹಿಳೆಯರಿಗೆ ಪ್ರತ್ಯೇಕ ಹಾಗೂ ಗುಣಮಟ್ಟದ ವೈದ್ಯಕೀ ಸೇವೆ ಒದಗಿಸಲು ರಾಜ್ಯಾದ್ಯಂತ 250 ಆಯುಷ್ಮತಿ ಕ್ಲಿನಿಕ್ ಗಳನ್ನು ಪ್ರಾರಂಭವಾಗಲಿದ್ದು, ಈ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ಶಿಕ್ಷಕರ ನೇಮಕಾತಿ ಅಕ್ರಮ ಹಗರಣ : ಮತ್ತೆ ನಾಲ್ವರು ಶಿಕ್ಷಕರು ಅರೆಸ್ಟ್
ಆಯುಷ್ಮತಿ ಕ್ಲಿನಿಕ್ ನಲ್ಲಿ ಮಹಿಳೆಯರ ಆರೋಗ್ಯ ಸಮಸ್ಯೆ ಗುರುತಿಸಿ ಸೂಕ್ತಿ ಚಿಕಿತ್ಸೆ ನೀಡಲಾಗುತ್ತದೆ. ಇದು ಕೇವಲ ಮಹಿಳೆಯರಿಗಾಗಿಯೇ ಮೀಸಲಾದ ಕ್ಲಿನಿಕ್ ಗಳು, ಇಲ್ಲಿ ನುರಿತ ಸ್ತ್ರೀರೋಗ ತಜ್ಞರು ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಹಾಗೂ ಆರೋಗ್ಯ ಸೇವೆಗಳನ್ನು ನೀಡಲಿದ್ದಾರೆ ಎಂದು ಹೇಳಿದ್ದಾರೆ.
BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಉಭಯ ರಾಜ್ಯಗಳ ಸಿಎಂಗಳ ಜೊತೆಗೆ ಅಮಿತ್ ಶಾ ಮಹತ್ವದ ಸಭೆ