ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಾರ್ವಜನಿಕರಿಗೆ ಭರ್ಜರಿ ಸೌಲತ್ತೊಂದನ್ನು ಘೋಷಿಸಿದ್ದಾರೆ. ಬುಧವಾರ ನಡೆದ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ, ಸಣ್ಣ ನಿವೇಶನದಾರರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
2,500 ಚದರ ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಕಡ್ಡಾಯವಾಗಿದ್ದ ‘ಸ್ವಾಧೀನಾನುಭವ ಪ್ರಮಾಣ ಪತ್ರ’ (Occupancy Certificate – OC) ನಿಯಮದಿಂದ ಒಂದು ಬಾರಿಗೆ ವಿನಾಯಿತಿ ನೀಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ:
ಈ ಸೌಲಭ್ಯವು ಎಲ್ಲರಿಗೂ ಅನ್ವಯಿಸುವುದಿಲ್ಲ. 2,500 ಅಡಿ ನಿವೇಶನಗಳಲ್ಲಿ ಮನೆ ನಿರ್ಮಿಸಿ, ವಿದ್ಯುತ್ ಸಂಪರ್ಕಕ್ಕಾಗಿ 2026ರ ಮೇ 31ರ ಒಳಗಾಗಿ ಅರ್ಜಿ ಸಲ್ಲಿಸುವ ಗ್ರಾಹಕರಿಗೆ ಮಾತ್ರ ಈ ‘ಒಂದು ಬಾರಿಯ ವಿನಾಯಿತಿ’ ಸಿಗಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಗಮನಿಸಿ: ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವ ಸಾರ್ವಜನಿಕರು ಸ್ವಾಧೀನಾನುಭವ ಪ್ರಮಾಣ ಪತ್ರ ಇಲ್ಲದಿದ್ದರೂ ತಮ್ಮ ಹೊಸ ಮನೆಗಳಿಗೆ ಅಧಿಕೃತವಾಗಿ ವಿದ್ಯುತ್ ಸಂಪರ್ಕವನ್ನು ಪಡೆದುಕೊಳ್ಳಬಹುದಾಗಿದೆ.
ರಾಜ್ಯದಲ್ಲಿ ಸ್ವಂತ ಮನೆ ನಿರ್ಮಿಸಿಕೊಂಡು ತಾಂತ್ರಿಕ ಕಾರಣಗಳಿಂದ ವಿದ್ಯುತ್ ಸಂಪರ್ಕ ವಂಚಿತರಾಗಿದ್ದ ಸಾವಿರಾರು ಮಧ್ಯಮ ಮತ್ತು ಕೆಳವರ್ಗದ ಕುಟುಂಬಗಳಿಗೆ ಸರ್ಕಾರದ ಈ ನಿರ್ಧಾರದಿಂದ ದೊಡ್ಡ ನಿರಾಳತೆ ಸಿಕ್ಕಂತಾಗಿದೆ.
ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ 2,500 ಅಡಿ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಮೇ 31, 2026ರ ಒಳಗಾಗಿ ಅರ್ಜಿ ಸಲ್ಲಿಸಿದವರಿಗೆ ವಿದ್ಯುತ್ ಸಂಪರ್ಕ ಪಡೆಯಲು ಒಂದು ಬಾರಿಯ ಸ್ವಾಧೀನಾನುಭವ… pic.twitter.com/NYUuIY08jl
— DIPR Karnataka (@KarnatakaVarthe) June 4, 2026








