GOOD NEWS : ರಾಜ್ಯದ ಮಹಿಳಾ ಶಿಕ್ಷಕಿಯರು/ನೌಕರರಿಗೆ `ಶಿಶುಪಾಲನಾ ರಜೆ’ ಮಂಜೂರು : ರಾಜ್ಯ ಸರ್ಕಾರ ಆದೇಶ!

ಬೆಂಗಳೂರು : ಅನುದಾನಿತ ಪ್ರಾಥಮಿಕ ಮಹಿಳಾ ಶಿಕ್ಷಕಿರಿಗೆ/ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.  ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ತಮ್ಮ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಅನುದಾನಿತ ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕರು/ನೌಕರರಿಗೆ ಶಿಶುಪಾಲನಾ ರಜೆಯನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕಾರ್ಯಗಳಿಗೆ ತೊಂದರೆಯಾಗದಂತೆ ವಿಸ್ತರಿಸಲು ಹಾಗೂ ರಜೆಯ ಸಮಯದಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದ ಒದಗಿಸಿಕೊಂಡು ವಿಸ್ತರಿಸಲು ಅಗತ್ಯ ಕ್ರಮವಹಿಸುವಂತೆ ನಿರ್ದೇಶಿಸಲಾಗಿದೆ.