ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 32 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 51 ಸಾವಿರ ಶಿಕ್ಷಕರ ಕೊರತೆ ಇದ್ದು, ಸದ್ಯ 13 ಸಾವಿರ ಶಿಕ್ಷಕರ ನೇಮಕಾತಿ ಆಗಿದೆ. ಶೀಘ್ರವೇ 32 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ 1 ನೇ ತರಗತಿ ಮಕ್ಕಳಿಗೆ ಗಣಕ ಯಂತ್ರ ತರಬೇತಿ ನೀಡಲಿದ್ದೇವೆ . ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಇದರಿಂದ ಸಹಾಯ ಆಗಬೇಕು ಹೇಳಿದರು.








