ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 5,202 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿಯ ಮೂಲಕ ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನೂ ಒಳಗೊಂಡಿವೆ. ಉಳಿದ ನೇರ ನೇಮಕಾತಿಗಳಲ್ಲೂ ಆದ್ಯತೆ ನೀಡಲಾಗುವುದು.
ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಚಿದಾನಂದ ಎಂ. ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಒಟ್ಟು 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಪ್ರಸ್ತುತ ಪ್ರಾಥಮಿಕ ಶಾಲೆಗಳಲ್ಲಿ 3,361 ಹಾಗೂ ಪ್ರೌಢಶಾಲೆಗಳಲ್ಲಿ 1,861 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದರು.
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಒತ್ತು: ಕಳೆದ ಬಜೆಟ್ನಲ್ಲಿ ಘೋಷಿಸಿದಂತೆ, ಕಲ್ಯಾಣ ಕರ್ನಾಟಕ ಭಾಗದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5,267 ಹುದ್ದೆಗಳ ಭರ್ತಿ ಪ್ರಕ್ರಿಯೆ ಈಗಾಗಲೇ ಚಾಲನೆಯಲ್ಲಿದೆ.
ನೇರ ನೇಮಕಾತಿ: ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡುವ ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ.
ಮೌಲ್ಯ ಶಿಕ್ಷಣಕ್ಕೆ ಪ್ರತ್ಯೇಕ ಅವಧಿ: ದೈಹಿಕ ಶಿಕ್ಷಣದ ಅವಧಿಯಲ್ಲಿ (PE Period) ಮೌಲ್ಯ ಶಿಕ್ಷಣವನ್ನು ಬೋಧಿಸುತ್ತಿಲ್ಲ ಎಂಬ ಪ್ರಶ್ನೆಗೆ ಸ್ಪಷ್ಟನೆ ನೀಡಿದ ಸಚಿವರು, “ಮೌಲ್ಯ ಶಿಕ್ಷಣವನ್ನು ದೈಹಿಕ ಶಿಕ್ಷಣದ ಅವಧಿಯಲ್ಲಿ ನೀಡುವ ಬದಲಿಗೆ, ಅದಕ್ಕಾಗಿಯೇ ಪ್ರತ್ಯೇಕ ಪಿರಿಯಡ್ ಮೀಸಲಿಟ್ಟು ಬೋಧಿಸಲಾಗುವುದು” ಎಂದು ತಿಳಿಸಿದರು.
"ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 5,202 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿಯ ಮೂಲಕ ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನೂ ಒಳಗೊಂಡಿವೆ. ಉಳಿದ ನೇರ… pic.twitter.com/AXRbs1R0KE
— DIPR Karnataka (@KarnatakaVarthe) March 17, 2026








