ಕಲಬುರಗಿ : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಈಶ್ವರ್ ಖಂಡ್ರೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಇಲಾಖೆಯಲ್ಲಿ ಇತ್ತೀಚೆಗೆ 341 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 510 ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರವೇ 6000 ಕಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಆನೆ, ಹುಲಿಗಳ ದಾಳಿಯಿಂದಾಗಿ ಪ್ರತಿ ವರ್ಷ 50ರಿಂದ 60 ಜನರು ಸಾವಿಗೀಡಾಗುತ್ತಿದ್ದಾರೆ. ಆನೆ ಮಾನವ ಸಂಘರ್ಷ ತಪ್ಪಿಸಲು ಕಾಡಿನಿಂದ ಆನೆಗಳು ಬರುವುದನ್ನು ತಪ್ಪಿಸಬೇಕಿದೆ. ಅದಕ್ಕಾಗಿ ಅರಣ್ಯದಲ್ಲಿ ಹೆಚ್ಚಿನ ಬಿದಿರು ಬೆಳೆಸಿ ಆನೆಗಳಿಗೆ ಆಹಾರ ಒದಗಿಸಲಾಗುವುದು. ಆನೆ ಕಾರಿಡಾರ್ ಗಳನ್ನು ಹಂತ ಹಂತವಾಗಿ ಪುನರ್ ಸ್ಥಾಪನೆ ಮಾಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದ ಬಿಸಿಲಿನ ತಾಪ ತಗ್ಗಿಸಲು ಈ ಭಾಗದ ಐದು ಜಿಲ್ಲೆಗಳಲ್ಲಿ 25 ಲಕ್ಷ ದೊಡ್ಡ ಗಾತ್ರದ ಸಸಿಗಳನ್ನು ನೆಡಲಾಗುತ್ತಿದೆ. ಅದಕ್ಕಾಗಿ ಇಂದು ಕಲಬುರಗಿಯಲ್ಲಿ ಹಸಿರು ಪಥ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದರು.
ಅರಣ್ಯ ಇಲಾಖೆ ವತಿಯಿಂದ “ಹಸಿರು ಕಲ್ಯಾಣ ಕರ್ನಾಟಕ” ಯೋಜನೆ ಅಡಿಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ ವನಮಹೋತ್ಸವ-2025 ಮತ್ತು ಹಸಿರು ಪಥ, ಕಲಬುರ್ಗಿ ಹಸಿರು ಹೆಜ್ಜೆಗಳು” ಕಾರ್ಯಕ್ರಮಕ್ಕೆ ಚಾಲನೆ ನೀಡಲು ಕಲಬುರ್ಗಿಗೆ ಆಗಮಿಸಿದ ನಮ್ಮೆಲ್ಲರ ನೆಚ್ಚಿನ ನಾಯಕರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಅರಣ್ಯ ಇಲಾಖೆ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಅರಣ್ಯ ಇಲಾಖೆ ವತಿಯಿಂದ "ಹಸಿರು ಕಲ್ಯಾಣ ಕರ್ನಾಟಕ" ಯೋಜನೆ ಅಡಿಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ "ವನಮಹೋತ್ಸವ-2025 ಮತ್ತು ಹಸಿರು ಪಥ, ಕಲಬುರ್ಗಿ ಹಸಿರು ಹೆಜ್ಜೆಗಳು" ಕಾರ್ಯಕ್ರಮಕ್ಕೆ ಚಾಲನೆ ನೀಡಲು ಕಲಬುರ್ಗಿಗೆ ಆಗಮಿಸಿದ ನಮ್ಮೆಲ್ಲರ ನೆಚ್ಚಿನ ನಾಯಕರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಎಐಸಿಸಿ ಅಧ್ಯಕ್ಷರಾದ… pic.twitter.com/cg2M5NBxjQ
— Eshwar Khandre (@eshwar_khandre) July 5, 2025