ಮಡಿಕೇರಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ 6 ಸಾವಿರಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿರುತ್ತದೆ. ಈ ಸಂಬಂಧ ಸದರಿ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿರುತ್ತದೆ. e-KYC ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.
ರೈತರು http://pmkisan.gov.in ಪೋರ್ಟಲ್‍ನ Farmers Corner ನ ಇ-ಕೆವೈಸಿ ಅವಕಾಶದಡಿ ರೈತನ (ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್ ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿ ಯನ್ನು ಪೋರ್ಟಲ್‍ನಲ್ಲಿ ದಾಖಲಿಸಿ “SUBMIT FOR AUTH” ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು e-KYC is “successfully submitted” ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. “e-KYC already done” ಎಂಬ ಮಾಹಿತಿ ಗೋಚರಿಸುತ್ತದೆ.
ಮೇಲೆ ತಿಳಿಸಿದಂತೆ, ಯಾವ ಫಲಾನುಭವಿಯು ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿ ಗಾಗಿ ಕಳುಹಿಸಿದ ಒಟಿಪಿ ಯು ಸ್ವೀಕೃತವಾಗುದಿಲ್ಲವೋ ಅವರು ಸಿಎಸ್‍ಸಿ (ನಾಗರೀಕ ಸೇವಾ ಕೇಂದ್ರಗಳಿಗೆ) ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.
ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರೀಕ ಸೇವಾ ಕೇಂದ್ರ(Citizen service centres) ಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಶಬಾನಾ ಎಂ. ಶೇಕ್ ಅವರು ತಿಳಿಸಿದ್ದಾರೆ.