ಬೆಂಗಳೂರು : ರಾಜ್ಯದ ಇತರೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ‘ಬಿ’ ಖಾತಾ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್ ಮತ್ತು ಫ್ಲಾಟ್ ಗಳಿಗೆ ‘ಎ’ ಖಾತಾ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು ರಾಜ್ಯದ ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ನೀಡೋದಕ್ಕೆ ಸಂಪುಟ ಸಭೆಯಲ್ಲ ನಿರ್ಧರಿಸಲಾಗಿದೆ ಎಂದರು.
ರಾಜ್ಯದ ಬಿ-ಖಾತಾ ನಿವೇಶನ, ಕಟ್ಟಡ, ಫ್ಲ್ಯಾಟ್ ಗಳಿಗೆ ಎ-ಖಾತಾ ನೀಡಲು ನಿರ್ಧರಿಸಲಾಗಿದೆ. ರಾಜ್ಯಾಧ್ಯಂತ 10 ಲಕ್ಷ ಕಟ್ಟಡಗಳಿಗೆ ಇದರಿಂದ ಲಾಭವಾಗಲಿದೆ. ಬೆಂಗಳೂರು ಬಳಿಕ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೂ ಇದನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಬಂಧಿಸಿದ ಪ್ರಾಧಿಕಾರದ ಅನುಮೋದನೆ ಪಡೆಯದೆ ನಿರ್ಮಾಣವಾ ಗಿರುವ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್ ಮತ್ತು ಫ್ಲಾಟ್‌ಗಳು ಈಗಾಗಲೇ ‘ಬಿ’ ಖಾತಾ ಪಡೆದಿದ್ದರೆ, ಅಂತಹ ಆಸ್ತಿಗಳಿಗೆ ಈಗ ಎ ಖಾತಾ ದೊರೆಯಲಿದೆ.
ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು#CabinetDecisions pic.twitter.com/oNhHlNZRgW
— DIPR Karnataka (@KarnatakaVarthe) January 8, 2026








