ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1,000 ರೂ. ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇನ್ನು ಪರಿಶಿಷ್ಟ ಜಾತಿ\ ಪರಿಶಿಷ್ಟ ಪಂಗಡದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವ 1 ಲಕ್ಷ ರೂ. ಸಾಲ ಹಾಗೂ 1.50 ಲಕ್ಷ ರೂ. ಸಹಾಯಧನವನ್ನು ಕ್ರಮವಾಗಿ 2.50 ಲಕ್ಷಕ್ಕೆ ಹೆಚ್ಚಿಸಲಾಗಿದೆ.