ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184(3) ರಲ್ಲಿ ಘೋಷಿಸಿರುವಂತೆ 2025-26ನೇ ಸಾಲಿಗೆ “50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು” ಸರ್ಕಾರದ ಮಂಜೂರಾತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಕ್ರ.ಸಂ.(1) ರ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ -184(3) ರಲ್ಲಿ ಈ ಕೆಳಕಂಡಂತೆ ಘೋಷಿಸಲಾಗಿರುತ್ತದೆ.
100 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ತೆರೆಯುವುದು “
ಮೇಲೆ ಓದಲಾದ ಕ್ರ.ಸಂ.(2) ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184 (3)ರ ಘೋಷಣೆಯಂತೆ, ಮೊದಲ ಹಂತದಲ್ಲಿ 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 60 ಸಂಖ್ಯಾಬಲದ 50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು ಮಂಜೂರಾತಿ ನೀಡಿ, ಪ್ರತಿ ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗೆ 07 ಹುದ್ದೆಗಳಂತೆ ಒಟ್ಟು 350 ಬೋಧಕ ಹುದ್ದೆಗಳನ್ನು ಸೃಜಿಸಿ ಭರ್ತಿ ಮಾಡಿಕೊಳ್ಳಲು ಅನುಮೋದನೆ ನೀಡಿ ಆದೇಶಿಸಿದೆ.
2025-26ನೇ ಸಾಲಿನಲ್ಲಿ 50 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಜನಪ್ರತಿನಿಧಿಗಳ ಬೇಡಿಕೆ, ಜಿಲ್ಲಾ ಕಛೇರಿಗಳ ವರದಿ ಹಾಗೂ ಇತರ ಅಂಶಗಳನ್ನು ಕೂಲಂಕಶವಾಗಿ ಪರಿಶೀಲಿಸಿ, ಗಣನೆಗೆ ತೆಗೆದುಕೊಂಡು ಹಾಗೂ ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮವಾಗಿ ಸ್ಥಳಾವಕಾಶ ಲಭ್ಯವಿರುವ 50 ಸ್ಥಳಗಳಲ್ಲಿ ಹೊಸ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಬಹುದಾಗಿರುತ್ತದೆ ಎಂದು ತಿಳಿಸಿ, 50 ಮೌಲಾನಾ ಆಜಾದ್ ಮಾದರಿ ಶಾಲೆಗಳ ಪೈಕಿ ವಿವಿಧ ಜಿಲ್ಲೆಗಳ ಸ್ಥಳಗಳಲ್ಲಿ 42 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು ಹಾಗೂ 50 ಹೊಸ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಅಗತ್ಯ ಹುದ್ದೆಗಳನ್ನು ಸೃಜಿಸಿ, ಭರ್ತಿ ಮಾಡಲು ಹಾಗೂ ಸದರಿ ಹುದ್ದೆಗಳ ಭರ್ತಿಯಾಗುವವರೆಗೆ ಇಲಾಖೆ ಮಾರ್ಗಸೂಚಿಗಳನ್ವಯ ಅತಿಥಿ ಶಿಕ್ಷಕರುಗಳನ್ನು ಹಾಗೂ ಉಳಿದ ಇತರೆ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರಿ ಆದೇಶವನ್ನು ಹೊರಡಿಸಬೇಕೆಂದು ಕೋರಿ ಮೇಲೆ ಓದಲಾದ ಕ್ರ.ಸಂ(3)ರಲ್ಲಿನ ಏಕ ಕಡತದಲ್ಲಿ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ ಇವರು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.