ಬೆಂಗಳೂರು : ರಾಜ್ಯದಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಬಗ್ಗೆ ಶೀಘ್ರದಲ್ಲಿ ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉತ್ತರಿಸಿದರು.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಿಟಿ ಶ್ರೀನಿವಾಸ್ ಕೇಳಿದ ಪ್ರಶ್ನೆಗೆ, ಉತ್ತರಿಸಿದ ಅವರು, ರಾಜ್ಯದಲ್ಲಿ 1,775 ಪ್ರಾಂಶುಪಾಲರ ವೃಂದದ ಹುದ್ದೆಗಳು ಮಂಜೂರಾಗಿದ್ದು 306 ನೇರ ನೇಮಕಾತಿ ಹಾಗೂ 919 ಭರ್ತಿಗೆ ಮೀಸಲಾಗಿರುತ್ತದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉತ್ತರಿದರು.








