ಬೆಂಗಳೂರು : ಬೆಂಗಳೂರಿನಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ವಿಚಾರವಾಗಿ ಗೃಹಬಳಕೆ ಸಿಲಿಂಡರ್ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟಪಡಿಸಿದ್ದಾರೆ. ಗೃಹ ಬಳಕೆದಾರರು ಯಾವುದೇ ಆತಂಕ ಪಡುವುದು ಬೇಡ ಸಾಕಷ್ಟು ಪ್ರಮಾಣದಲ್ಲಿ ಅಡುಗೆ ಅನಿಲದ ದಾಸ್ತಾನು ಇದೆ ಎಂದು ತಿಳಿಸಿದರು.
ಹೀಗಾಗಿ ಎಲ್‌ಪಿಜಿ ಸಿಲಿಂಡರ್ ಬಗ್ಗೆ ಯಾರು ಆತಂಕಪಡಬಾರದು. ಏನಾದರೂ ಕುಂದು ಕೊರತೆ ಇದ್ದರೆ ಸಹಾಯವಾಣಿ ಸಂಪರ್ಕಿಸಿ ಸಹಾಯವಾಣಿ ಸಂಖ್ಯೆ 9611404384 ಗೆ ಕರೆ ಮಾಡಲು ಮನವಿ ಮಾಡಿದರು ಬೆಂಗಳೂರು ಡಿಸಿ ಜಗದೀಶ್ ಅವರು ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.








