ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷದಲ್ಲೇ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಿನ್ನೆ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು.
ಈ ಯೋಜನೆ ಮೂಲಕ ಪ್ರತಿ ಗ್ರಾಮದಲ್ಲೂ ಎರಡು ಮಹಿಳಾ ಸಂಘಗಳಿಗೆ ಈ ಯೋಜನೆಯಡಿ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತದೆ, ಇದರಿಂದ ಮಹಿಳೆಯರ ಸಬಲೀಕರಣವಾಗಲಿದೆ, ಈ ಯೋಜನೆಯನ್ನು ಈ ವರ್ಷವೇ ಜಾರಿ ಮಾಡುತ್ತೇವೆ ಎಂದು ಹೇಳಿದರು. ಇನ್ನೂ, ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದ್ಯಾ ಎಂಬುದನ್ನು ಕಾದು ನೋಡಬೇಕಾಗಿದೆ. ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಮಹಿಳಾ ಆಯೋಗವನ್ನು ಬಲಪಡಿಸಬೇಕೆಂಬ ಬೇಡಿಕೆ ಕೇಳಿಬಂದಿದ್ದು, ನಾವು ನಿರ್ಭಯ ಕಾನೂನು ಜಾರಿಗೊಳಿಸಲು ಸಿದ್ದರಾಗಿದ್ದೇವೆ. ಕಾನೂನಿನ ಬಗ್ಗೆ ಪುರುಷರಿಗೆ ಮಾಹಿತಿ ನೀಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನಾವು ಮುಂದಿನ ದಿನಗಳಲ್ಲಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.
33 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ. ಆರ್ಥಿಕ ಸಹಾಯ
ಸ್ತ್ರೀ ಸಾಮರ್ಥ್ಯ ಯೋಜನೆಯಡಿ 33 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ. ಆರ್ಥಿಕ ಸಹಾಯ, ತರಬೇತಿ ನೀಡಿ, ಸಂಘದಲ್ಲಿ ಉತ್ಪಾದನೆಯಾಗುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ 5 ಲಕ್ಷ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದರು.
ಬೇಲೂರು ತಾಲ್ಲೂಕಿನ ಚಿಲ್ಕೂರು ಶ್ರೀ ಮಠ ಪುಷ್ಪಗಿರಿ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವ ಹಾಗೂ ಗುರು ಕರಿಬಸವೇಶ್ವರ ಅಜ್ಜಯ್ಯನವರ ಪಲ್ಲಕ್ಕಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ದುಡಿಮೆಗೆ ಅವಕಾಶ ದೊರೆತರೆ ರಾಜ್ಯದ ಜನತೆ ಶ್ರೀಮಂತರಾಗುತ್ತಾರೆ. ಪ್ರತಿ ದುಡಿಮೆಗೆ ನಾವು ಸಹಾಯ ಮಾಡುವ ಮೂಲಕ ರಾಜ್ಯವೂ ಅಭಿವೃದ್ಧಿಯಾಗುತ್ತದೆ. ಈ ಮೂಲ ತತ್ವದಿಂದ ಆಡಳಿತ ಸೂತ್ರವನ್ನು ನಡೆಸುತ್ತಿದ್ದೇವೆ. ರೈತರು, ರೈತರ ಸಂಘಗಳು ಸ್ವಾಮೀಜಿಗಳ ರಣಘಟ್ಟ ನೀರಾವರಿ ಹೋರಾಟದಲ್ಲಿ ಭಾಗಿಯಾಗಿದ್ದರು. ಜನರ ಹಿತದೃಷ್ಟಿಯಿಂದಲೇ ಕೈಗೊಂಡ ಹೋರಾಟದ ಸಂದರ್ಭದಲ್ಲಿ ಈ ಭಾಗದ ಬರ ನೀಗಿಸಲು ಈ ಕೆಲಸವನ್ನು ಒತ್ತಾಯ ಮಾಡಿ ಲಿಂಗೇಶ್ ಮಾಡಿಸಿದ್ದರು. .ರಣಘಟ್ಟ ಕೂಡ ಬಿಜೆಪಿ ಸರ್ಕಾರವಿದ್ದಾಗಲೇ ಅನುಮೋದನೆಗೊಂಡಿತು ಎಂದರು.
ಆನೆ ಹಾವಳಿ ತಡೆಗಟ್ಟಲು ಅರಣ್ಯ ಕಾರ್ಯಪಡೆಯನ್ನು ರಚಿಸಲಾಗಿದೆ. 24/7 ಕೆಲಸ ಮಾಡಲಿದ್ದು,ಬಜೆಟ್ ನಲ್ಲಿ ಈಗಾಗಲೇ ನೂರು ಕೋಟಿ ರೂ.ಗಳ ಅನುದಾನ ಮೀಸಲಿರಿಸಿದ್ದು, ಈ ಕಾರ್ಯಕ್ಕೆ ಹೆಚ್ಚುವರಿಯಾಗಿ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.. ಕಾರ್ಯಪಡೆಗಳಿಗೆ ಹೆಚ್ಚಿನ ತರಬೇತಿ, ವಾಹನ, ಸಲಕರಣೆ, ಪರಿಣಿತರನ್ನು ಜೋಡಿಸಲಾಗುವುದು ಆನೆಗಳನ್ನು ಕಾಡಿಗೆ ಅಟ್ಟಲು ನಿಯಂತ್ರಣಾ ಕೊಠಡಿ ಸ್ಥಾಪಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಸಕಲೇಶಪುರದಲ್ಲಿ ಕಾರ್ಯಪಡೆಯ ಕಚೇರಿ ತೆರೆಯಲಾಗುತ್ತಿದೆ ಎಂದರು.
ಸ್ತ್ರೀ ಸಾಮರ್ಥ್ಯ ಯೋಜನೆಯಡಿ 33 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ. ಆರ್ಥಿಕ ಸಹಾಯ, ತರಬೇತಿ ನೀಡಿ, ಸಂಘದಲ್ಲಿ ಉತ್ಪಾದನೆಯಾಗುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ 5 ಲಕ್ಷ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲಾಗುತ್ತದೆ.ಈ ಯೋಜನೆಯಂತೆಯೇ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಿಂದ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲಾಗುತ್ತಿದೆ. ಕಾಯಕವೇ ಕೈಲಾಸ ಎಂಬಂತೆ ದುಡಿಯುವ ಕೈಗಳಿಗೆ ಸರ್ಕಾರ ಉದ್ಯೋಗ ನೀಡುತ್ತಿದೆ. ಕಾಯಕನಿಷ್ಠೆ ಇರುವ ಸಮಾಜ ನಿರ್ಮಾಣವಾದಾಗ ಬಡತನವಿರುವುದಿಲ್ಲ. ಸಮಾನತೆಯನ್ನು ಸ್ಥಾಪಿಸಿ ಆರ್ಥಿಕ ಅಭಿವೃದ್ಧಿ ಮಾಡಲಾಗುವುದು ಎಂದು ಬೊಮ್ಮಾಯಿ ಹೇಳಿದ್ದರು.
ನೀವು ನೇರವಾಗಿ ‘ಪ್ರಧಾನಿ’ ಸಂಪರ್ಕಿಸ್ಬೇಕಾ.? ಮೋದಿ ‘ದೂರವಾಣಿ ಸಂಖ್ಯೆ, ಇ-ಮೇಲ್ ಹಾಗೂ ವಿಳಾಸ’ ಹೀಗಿದೆ.!