ಚಿಕ್ಕಮಗಳೂರು : ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿ ವೇತನಕ್ಕೆ ( SCHOLARSHIP) ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ , ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ 31:12:2021 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.
ಇದೀಗ ಮುಂದುವರೆದು, ವಿದ್ಯಾರ್ಥಿಗಳು, ಶೈಕ್ಷಣಿಕ ಸಂಸ್ಥೆಗಳ ಮನವಿ ಮೇರೆಗೆ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31, 2022 ರವರೆಗೆ ವಿಸ್ತರಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು ಪೋರ್ಟಲ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಚೇರಿ ಅಥವಾ ಕಾಲೇಜು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.