ಬೆಂಗಳೂರು : ಅಮೃತ ಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ ತಿಂಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು ಅಮೃತ ಜ್ಯೋತಿ ಯೋಜನೆಯಡಿ ಫಲಾನುಭವಿಗಳನ್ನು ನೊಂದಾಯಿಸಲು ಅಕ್ಟೋಬರ್ 15 ರಿಂದ 30 ರವರೆಗೆ ಬೃಹತ್ ಅಭಿಯಾನ ಕೈಗೊಳ್ಳಲು ಅಧಿಕಾರಿಗಳಿಗೆ ಇಂಧನ ಸಚಿವ ವಿ. ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ ತಿಂಗಳಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಈಗಾಗಲೇ 2.5 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು, ಅಭಿಯಾನದಲ್ಲಿ 10 ಲಕ್ಷ ಮಂದಿಯನ್ನು ಗುರುತಿಸಿ ನೊಂದಣಿ ಮಾಡಿಸುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಎಲ್ಲಾ ಎಸ್ಕಾಂ ಗಳ ವ್ಯಾಪ್ತಿಯಲ್ಲಿ ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆಯಲ್ಲಿ ಫಲಾನುಭವಿಗಳ ಸಮಾವೇಶ ನಡೆಸಲಿದ್ದು,ಇದನ್ನು ಪರಿಶೀಲಿಸಿ ಕ್ರಮ ಕೈಗೊಂಡು ನವೆಂಬರ್ 15 ರೊಳಗಾಗಿ ಸಂಪರ್ಕ ನೀಡುವಂತೆ ತಿಳಿಸಿದ್ದಾರೆ.
OMG!: ನೂರಲ್ಲ, ಸಾವಿರವಲ್ಲ 62,46,364 ರೂ.ಗೆ ಸೇಲಾಯ್ತು 1880 ರ ದಶಕದ ಈʻಲೆವಿಸ್ ಜೀನ್ಸ್ʼ!