ಬೆಂಗಳೂರು : FRP ನಿಗದಿ ಸೇರಿದಂತೆ ಕಬ್ಬು ಬೆಳೆಗಾರರ ಕೆಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯದ ಜಿಲ್ಲೆಗಳಲ್ಲಿ ಕಳೆದ 11 ದಿನದಿಂದ ರೈತರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಇದರ ನಡುವೆ ಶೀಘ್ರದಲ್ಲೇ ಕಬ್ಬಿಗೆ FRP (ನ್ಯಾಯಸಮ್ಮತ ಮತ್ತು ಪ್ರೋತ್ಸಾಯದಾಯಕ ದರ) ನೀಡಲಾಗುತ್ತದೆ ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರದಲ್ಲೇ ಕಬ್ಬಿಗೆ ಎಫ್ಆರ್ಪಿ (ನ್ಯಾಯಸಮ್ಮತ ಮತ್ತು ಪ್ರೋತ್ಸಾಯದಾಯಕ ದರ) ನೀಡಲಾಗುತ್ತದೆ, ಹೆಚ್ಚುವರಿ ದರ ನಿಗದಿಗೆ ಸಕ್ಕರೆ ಆಯುಕ್ತರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಮಿತಿಗೆ ಐದು ದಿನದಲ್ಲಿ ವರದಿ ಕೊಡಲು ಸೂಚನೆ ನೀಡಲಾಗಿದೆ. ನ.20ರ ಒಳಗಾಗಿ ಮುಖ್ಯಮಂತ್ರಿಗಳು ಹೆಚ್ಚುವರಿ ಬೆಲೆ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ನಿನ್ನೆ ರಾಜ್ಯ ಸರ್ಕಾರದ ಕಬ್ಬು ಖರೀದಿ ನಿಯಂತ್ರಣ ಮಂಡಳಿ ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರು ಸಭೆ ನಡೆಸಿದ್ದು, ಸಭೆ ನಡೆಸಿದ ಬಳಿಕ ಸಚಿವರು ಈ ಕುರಿತು ಮಾಹಿತಿ ನೀಡಿದ್ದಾರೆ.
ನಿನ್ನೆ ಕಲಬುರಗಿಯಲ್ಲಿ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಹಾಗೂ ಕೂಡಲೇ ಕಾರ್ಖಾನೆ ಪ್ರಾರಂಭಿಸುವಂತೆ ಆಗ್ರಹಿಸಿ ಕಾರ್ಖಾನೆ ಮುತ್ತಿಗೆಗೆ ಯತ್ನಿಸಿದ ನೂರಾರು ಜನ ರೈತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದ್ದಾರೆ. ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಆಳಂದನ್ ಎನ್ಎಸ್ಎಲ್ ಶೂಗರ್ ಕಾರ್ಖಾನೆಗೆ ಟ್ಯಾಕ್ಟರ್ ಗಳ ಸಮೇತ ಮುತ್ತಿಗೆ ಯತ್ನಿಸಿದ ಮೇಳೆ ಮಾಜಿ ಶಾಸಕ ಬಿ ಆರ್ ಪಾಟೀಲ್ ಸೇರಿ ಒಟ್ಟು 150ಕ್ಕೂ ಅಧಿಕ ರೈತರನ್ನು ವಶಕ್ಕೆ ಪಡೆದರು.