ನವದೆಹಲಿ : ಧಾರವಾಡ ಐಐಟಿ ಸೇರಿದಂತೆ ಐದು ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.ಇದರಿಂದ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, ರಾಜ್ಯದ ಧಾರವಾಡ ಐಐಟಿ ಹಾಗೂ ಆಂಧ್ರಪ್ರದೇಶ ತಿರುಪತಿ ಐಐಟಿ, ಛತ್ತೀಸ್‌ಗಢದ ಭಿಲಾಯಿ ಐಐಟಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕೇರಳದ ಪಾಲಕ್ಕಾಡ್‌ಗಳಲ್ಲಿ ಸ್ಥಾಪಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಿತು ಎಂದಿದ್ದಾರೆ.
ಧಾರವಾಡ ಐಐಟಿ ಸೇರಿದಂತೆ ಐದು ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಒಪ್ಪಿಗೆ ನೀಡಿದೆ. ಇದರಿಂದ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಲಿದೆ. ಹೊಸ ಸಂಶೋಧನಾ ಪಾರ್ಕ್‌ಗಳು ಮತ್ತು 130 ಅಧ್ಯಾಪಕರ ಹುದ್ದೆಗಳ ಸೃಷ್ಟಿಯೂ ಈ ಯೋಜನೆಯ ಭಾಗವಾಗಿದೆ. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ ಮತ್ತು ದೇಶದ ಆರ್ಥಿಕ ಬೆಳವಣಿಗೆಗೆ ನೆರವಾಗಲಿದೆ ಎಂದರು.