ಬೆಳಗಾವಿ : ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ
ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.








