ಬೆಂಗಳೂರು : 2017ರ ಮೊದಲು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕಗೊಂಡ ವರಿಗೆ 1- 5ನೇ ತರಗತಿವರೆಗೆ ಮಾತ್ರ ಬೋಧನೆಗೆ ಸೀಮಿತಿಗೊಳಿಸಿ ಹಿಂಬಡ್ತಿ ಯಿಂದಾಗಿರುವ ಅನ್ಯಾಯ ಸರಿಪಡಿಸುವ ಬಗ್ಗೆ ಗುರುವಾರ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಯಾಗಿದೆಯಾದರೂ ಮುಂಬಡ್ತಿ ನೀಡುವ ಕುರಿತು ಅಂತಿಮ ತೀರ್ಮಾನ ಮಾಡಲಾಗಿಲ್ಲ.
ಪದವಿ ಪಡೆದಿರುವ ಪ್ರಾಥಮಿಕ ಶಿಕ್ಷಕರನ್ನು 7ನೇತರಗತಿವರೆಗೆ ಬೋಧನೆಗೆ ಅವಕಾಶ ನೀಡಿ ಒಂದು ವೇತನ ಮುಂಬಡ್ತಿ ಬೇಡಿಕೆ8 ವರ್ಷಗಳಿಂದ ಇದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಕೆಲ ಕಾನೂನು ಅಂಶಗಳ ವಿಚಾರವಾಗಿ ಕಾನೂನು ಇಲಾಖೆ ಅಭಿಪ್ರಾಯ ಕೇಳಲಾಗಿದೆ. ಅಭಿಪ್ರಾಯ ಪಡೆದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.