ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತದಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಓಲ್ಡ್ ಮದ್ರಾಸ್ ರಸ್ತೆಯ ಮೇಳಹಳ್ಳಿ ಬ್ರಿಡ್ಜ್ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಲಾರಿಗೆ ಹಿಂದಿನಿಂದ ಗೂಡ್ಸ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋದಲ್ಲಿ ಇದ್ದಂತಹ ಮೂವರ ಸ್ಥಿತಿ ಇದೀಗ ಗಂಭೀರವಾಗಿದೆ. ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








