ಬೆಂಗಳೂರು: ಕೆಲಸ ಖಾಲಿ ಇರುವ ಕಡೆ ಅಂಗವಿಕಲರಿಗೆ ಸರ್ಕಾರ ಉದ್ಯೋಗವನ್ನು ನೀಡಬೇಕು ಎಂದು ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ. ಗೋಪಾಲಯ್ಯ ಅವರು ಆಗ್ರಹಿಸಿದರು.
ನಂದಿನಿ ಲೇಔಟ್ ನ ಶಂಕರನಗರ ಆಟದ ಮೈದಾನದಲ್ಲಿ ಡಾ. ನವೀನ ಗೌಡ ಅವರು ಕಾಂತ ಕ್ಲಿನಿಕ್ ವತಿಯಿಂದ ಆಯೋಜಿಸಿದ್ದ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ವಿಕಲಚೇತನರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡುವಂತಹ ಇಂತಹ ಕಾರ್ಯಕ್ರಮಗಳು ಪ್ರತಿ ವರ್ಷವೂ ನಡೆಯಬೇಕು. ಕಾಂತ ಕ್ಲಿನಿಕ್ ಉತ್ತಮವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇಂದಿನ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದವು ಯಶಸ್ವಿಯಾಗಲಿ ಇದರ ಸದುಪಯೋಗವನ್ನು ಪಡೆದುಕೊಂಡು ಆರೋಗ್ಯದ ಕಡೆ ಗಮನಹರಿಸಿ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು, ಫ್ರೀಡಂ ಟಿವಿಯ ಮುಖ್ಯಸ್ಥರಾದ ನಾಗರಾಜ್, ಡಾ. ನಾಗೇಂದ್ರ ಸೇರಿದಂತೆ ಇತರರು ಹಾಜರಿದ್ದರು.