ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಹೆಸರಲ್ಲಿ ವಂಚನೆಗೆ ಯತ್ನಿಸಿದಂತ ಆರೋಪಿ ಗೋವರ್ಧನ್ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಮೂಲಕ ವಂಚನೆ ಕೇಸ್ ಗೆ ಬ್ರೇಕ್ ಹಾಕಿದ್ದಾರೆ.
ಕೇಂದ್ರ ಸಚಿವ ವಿ.ಸೋಮಣ್ಣ ಅವರ ಆಪ್ತ ಸಹಾಯಕ ನೀಡಿದಂತ ದೂರಿನ ಹಿನ್ನಲೆಯಲ್ಲಿ ತುಮಕೂರು ಪೊಲೀಸರು ಆರೋಪಿ ಗೋವರ್ಧನ್ ಎಂಬಾತನನ್ನು ಬಂಧಿಸಿದ್ದಾರೆ.
ಅಂದಹಾಗೇ ಆರೋಪಿ ಗೋವರ್ಧನ್ ಜನರಿಗೆ ಗಂಗಾಕಲ್ಯಾಣ ಯೋಜನೆ ಮಾಡಿಸಿಕೊಡುವುದಾಗಿ ಹೇಳುತ್ತಿದ್ದರಂತೆ. ಇದಕ್ಕಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಲೆಟರ್ ಹೆಡ್ ಹಾಗೂ ಸಹಿಯನ್ನು ನಕಲಿ ಮಾಡಿ, ವಂಚನೆಗೆ ಯತ್ನಿಸಿದ್ದರಂತೆ.
ಈ ವಿಷಯವ ತಿಳಿದು ಬಂದ ಕಾರಣ, ಸೋಮಣ್ಣ ಆಪ್ತ ಸಹಾಯಕ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಮಿಡಿಗೇಶಿ ಮೂಲದ ಗೋವರ್ಧನ್ ಬಂಧಿಸಿ, ಜೈಲಿಗಟ್ಟಿದ್ದಾರೆ.
ತಾಯಿ ,ನಾಲ್ವರು ಸಹೋದರಿಯರ ಹತ್ಯೆ ಪ್ರಕರಣ: ‘ಹಿಂದೂ’ ಆಗಲು ಬಯಸಿದ್ದ ಆರೋಪಿ ಅರ್ಷದ್
BREAKING : ಯಾದಗಿರಿಯಲ್ಲಿ ಭೀಕರ ಮರ್ಡರ್ : ಅನೈತಿಕ ಸಂಬಂಧ ಹಿನ್ನೆಲೆ, ಕತ್ತು ಕುಯ್ದು ವ್ಯಕ್ತಿಯ ಬರ್ಬರ ಹತ್ಯೆ!