Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

12/04/2026 5:21 PM

371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ

12/04/2026 5:00 PM

SHOCKING : ಇಯರ್‌ ಬಡ್‌ ಬಳಸೋ ಮುನ್ನ ಹುಷಾರ್ : ಕಿವಿಯಲ್ಲೇ ಇಯರ್‌ ಬಡ್‌ ಸ್ಫೋಟಗೊಂಡು ವಿದ್ಯಾರ್ಥಿನಿಗೆ ಗಂಭೀರ ಗಾಯ!

12/04/2026 5:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉರ್ದು ಭಾಷೆಗೆ ಸರ್ಕಾರ ಹೆಚ್ಚಿನ ಅನುದಾನ ಆರೋಪ: ಈ ಸ್ಪಷ್ಟನೆ ಕೊಟ್ಟ ಸಿಎಂ ಸಿದ್ಧರಾಮಯ್ಯ
KARNATAKA

ಉರ್ದು ಭಾಷೆಗೆ ಸರ್ಕಾರ ಹೆಚ್ಚಿನ ಅನುದಾನ ಆರೋಪ: ಈ ಸ್ಪಷ್ಟನೆ ಕೊಟ್ಟ ಸಿಎಂ ಸಿದ್ಧರಾಮಯ್ಯ

By kannadanewsnow0927/05/2025 5:18 PM

ಬೆಂಗಳೂರು: ರಾಜ್ಯ ಸರ್ಕಾರವು ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ, ಉರ್ದು ಭಾಷೆಗೆ ಹೆಚ್ಚಿನ ಅನುದಾನ ನೀಡುತ್ತಿದೆ ಎಂಬುದಾಗಿ ಬಿಜೆಪಿ ಆರೋಪಿಸಲಾಗಿತ್ತು. ಈ ಆರೋಪಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಕೆಳಗಿನಂತೆ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್ ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದಿದ್ದಾರೆ.

2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆಗೆ ₹34,438 ಕೋಟಿ ಮತ್ತು ಸಮಾಜ ಕಲ್ಯಾಣ ಮತ್ತಿತರ ಇಲಾಖೆಗಳಿಗೆ ಸೇರಿದ ಶಾಲೆಗಳಿಗೆ ₹4,150 ಕೋಟಿ ಹೀಗೆ ಕನ್ನಡ ಭಾಷೆಯ ಶಾಲೆಗಳಿಗಾಗಿಯೇ ರಾಜ್ಯ ಸರ್ಕಾರ ಒಟ್ಟು 38,688 ಕೋಟಿ ರೂ.ಗಳನ್ನು ನೀಡಿದೆ.
ಇದರ ಜೊತೆಯಲ್ಲಿ ಸರ್ಕಾರಿ ಶಾಲೆಗಳ ನಿರ್ವಹಣೆ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ಒಟ್ಟು 999.30 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ. ಈ ಒಟ್ಟು ಅನುದಾನ ಕನ್ನಡ ಭಾಷೆಯ ಅಭಿವೃದ್ದಿಗಾಗಿಯೇ ವ್ಯಯವಾಗಲಿದೆ. ಹೀಗಿರುವಾಗ ಕನ್ನಡ ಭಾಷೆಗೆ ರಾಜ್ಯ ಸರ್ಕಾರ ಕೇವಲ 32 ಕೋಟಿ ರೂಪಾಯಿ ಅನುದಾನ ನೀಡುತ್ತಿದೆ ಎಂಬ ಮಾಹಿತಿಯ ಪ್ರಸಾರದ ಹಿಂದೆ ರಾಜಕೀಯ ದುರುದ್ದೇಶ ಇರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ಅತಿ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಇರುವ ರಾಜ್ಯದ ಉರ್ದು ಮಾಧ್ಯಮ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಬೋಧನೆಯ ಗುಣಮಟ್ಟವನ್ನು ಹೆಚ್ಚಿಸುವ ಹಾಗೂ ಮೌಲಾನ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಉದ್ದೇಶದಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ 100 ಕೋಟಿ ರೂ.ಗಳನ್ನು ಅಲ್ಪಸಂಖ್ಯಾತ ಇಲಾಖೆಯಡಿ ಒದಗಿಸಲಾಗಿದೆ. ಈ ಅನುದಾನವನ್ನು ಕೇವಲ ಭಾಷಾ ಕಲಿಕೆಗೆ ಮಾತ್ರವಲ್ಲ ಶಾಲಾ ಮೂಲಸೌಕರ್ಯ, ಶಿಕ್ಷಕರ ನೇಮಕಾತಿಗಾಗಿ, ಪಠ್ಯಪುಸ್ತಕಗಳು ಮತ್ತು ಹೊಸ ಶಾಲಾ ಕಟ್ಟಡಗಳ ನಿರ್ಮಾಣಕ್ಕೂ ಬಳಸಲಾಗುವುದು ಎಂದು ತಿಳಿಸಿದ್ದಾರೆ.

ಕನ್ನಡ, ಉರ್ದು ಭಾಷೆಗಳು ಸೇರಿದಂತೆ ಯಾವುದೇ ಭಾಷೆಯನ್ನು ನಿರ್ದಿಷ್ಠ ಜಾತಿ, ಧರ್ಮದ ಜೊತೆ ಜೋಡಿಸುವುದು ಆ ಭಾಷೆಗಳಿಗೆ ತೋರುವ ಅಗೌರವವಾಗುತ್ತದೆ. ನಮ್ಮ ಸರ್ಕಾರ ರಾಜ್ಯದಲ್ಲಿ ಬಳಕೆಯಲ್ಲಿರುವ ಎಲ್ಲ ಭಾಷೆಗಳ ಬಗ್ಗೆ ಸಮಾನ ಕಾಳಜಿಯನ್ನು ಹೊಂದಿದೆ. ಇದೇ ಸದುದ್ದೇಶದಿಂದ ರಾಜ್ಯದಲ್ಲಿ ಬಳಕೆಯಲ್ಲಿರುವ ತುಳು, ಕೊಂಕಣಿ, ಅರೆಬಾಸೆ, ಕೊಡವ ಭಾಷೆಗಳಿಗಾಗಿಯೇ ಪ್ರತ್ಯೇಕ ಅಕಾಡೆಮಿಗಳನ್ನು ಸ್ಥಾಪಿಸಲಾಗಿದ್ದು, ಇವುಗಳಿಗೆ ವಾರ್ಷಿಕ 80 ಲಕ್ಷ ರೂಪಾಯಿಗಳ ಅನುದಾನವನ್ನು ನೀಡಲಾಗುತ್ತದೆ. ಇದರ ಜೊತೆಗೆ ವಿಶೇಷ ಕಾರ್ಯಕ್ರಮಗಳಿಗಾಗಿ ಹೆಚ್ಚುವರಿ ಅನುದಾನವನ್ನು ನೀಡಲಾಗುತ್ತದೆ ಎಂದಿದ್ದಾರೆ.

ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿಯೇ ಪ್ರತ್ಯೇಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದೆ. ಇದರಡಿಯಲ್ಲಿ 14 ಅಕಾಡೆಮಿಗಳು, 3 ಪ್ರಾಧಿಕಾರ ಮತ್ತು ಸಾಹಿತಿಗಳ ಹೆಸರಿನ 24 ಟ್ರಸ್ಟ್ ಗಳು ಕಾರ್ಯನಿರ್ವಹಿಸುತ್ತಿವೆ. ಇವೆಲ್ಲವೂ ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮೀಸಲಾಗಿವೆ ಎಂದು ಹೇಳಿದ್ದಾರೆ.

ಕನ್ನಡ ಭಾಷೆಗೆ ಕನ್ನಡಿಗರೆಲ್ಲರೂ ತಾಯಿಯ ಸ್ಥಾನವನ್ನು ನೀಡಿದ್ದು ಇದೇ ಗೌರವವನ್ನು ನಮ್ಮ ಸರ್ಕಾರ ಕೂಡಾ ಹೊಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎನ್ನುವುದನ್ನು ನಾನು ಪದೇ ಪದೇ ಹೇಳಿಕೊಂಡು ಬಂದಿದ್ದೇನೆ. ಇದೇ ರೀತಿ ನಾಡು-ನುಡಿಗೆ ಬಗೆವ ಅವಮಾನವನ್ನು ಕೂಡಾ ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಹೀಗಿರುವಾಗ ಕನ್ನಡ ಭಾಷೆಗಾಗಿ ಕೇವಲ 32 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುಳ್ಳು ಸುದ್ದಿಯನ್ನು ರಾಜ್ಯ ಬಿಜೆಪಿ ಹಂಚಿಕೊಂಡು ಜನರನ್ನು ತಪ್ಪು ದಾರಿಗೆಳೆಯುತ್ತಿರುವುದು ಅಕ್ಷಮ್ಯ ಅಪರಾಧ ಮಾತ್ರವಲ್ಲ ಕನ್ನಡ ನಾಡು ಮತ್ತು ನುಡಿಗೆ ಬಗೆವ ದ್ರೋಹವಾಗಿದೆ. ರಾಜ್ಯ ಬಿಜೆಪಿ ತಕ್ಷಣ ಸ್ಪಷ್ಟೀಕರಣದ ಮೂಲಕ ಸತ್ಯ ಸಂಗತಿಯನ್ನು ತಿಳಿಸುವ ಜೊತೆಯಲ್ಲಿ ತಮ್ಮಿಂದ ಆಗಿರುವ ತಪ್ಪಿಗೆ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.

BREAKING: ದಕ್ಷಿಣ ಕನ್ನಡದಲ್ಲಿ ಮತ್ತೆ ಮಾರಕಾಸ್ತ್ರಗಳ ಸದ್ದು: ವಾಹನ ಚಾಲಕನ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನ

BIG NEWS : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ : ಬಿವೈ ವಿಜಯೇಂದ್ರ ಫಸ್ಟ್ ರಿಯಾಕ್ಷನ್

Share. Facebook Twitter LinkedIn WhatsApp Email

Related Posts

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

12/04/2026 5:21 PM2 Mins Read

371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ

12/04/2026 5:00 PM2 Mins Read

ನಾಳೆಯಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

12/04/2026 3:53 PM1 Min Read
Recent News

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

12/04/2026 5:21 PM

371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ

12/04/2026 5:00 PM

SHOCKING : ಇಯರ್‌ ಬಡ್‌ ಬಳಸೋ ಮುನ್ನ ಹುಷಾರ್ : ಕಿವಿಯಲ್ಲೇ ಇಯರ್‌ ಬಡ್‌ ಸ್ಫೋಟಗೊಂಡು ವಿದ್ಯಾರ್ಥಿನಿಗೆ ಗಂಭೀರ ಗಾಯ!

12/04/2026 5:00 PM

ಸಿಹಿಯಾದ ಡೆಸರ್ಟ್ ಜೊತೆಗೆ 40 ಗ್ರಾಂ ಪ್ರೋಟೀನ್! ಇಲ್ಲಿದೆ ಗ್ರೀಕ್ ಯೋಗರ್ಟ್‌ನ ಆರೋಗ್ಯಕರ ರೆಸಿಪಿ

12/04/2026 4:36 PM
State News
KARNATAKA

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

By kannadanewsnow0912/04/2026 5:21 PM KARNATAKA 2 Mins Read

ಧಾರವಾಡ: ನಗರದ ಹಾಸ್ಮಿ ನಗರದಲ್ಲಿ ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ (32) ಅವರ…

371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ

12/04/2026 5:00 PM

ನಾಳೆಯಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

12/04/2026 3:53 PM

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ಸಾಕು ನಾಯಿಯ ಮೇಲೆ ಕ್ರೌರ್ಯ: ಬೆಂಗಳೂರಿನಲ್ಲಿ ವ್ಯಕ್ತಿಯ ಅಮಾನವೀಯ ಕೃತ್ಯ!

12/04/2026 3:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.