ಬೆಂಗಳೂರು: ರಾಜ್ಯದಲ್ಲಿ ತೀವ್ರ ಶೀತಗಾಳಿ ಬಿಸುತ್ತಿದೆ. ಅಲ್ಲಲ್ಲಿ ಚಳಿಯು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಕೆಲ ಸಲಹೆಗಳನ್ನು ನೀಡಿದೆ. ಅವುಗಳನ್ನು ಚಳಿಯ ಈ ಸಮಯದಲ್ಲಿ ತಪ್ಪದೇ ಪಾಲಿಸುವಂತೆ ಸೂಚಿಸಿದೆ.
ಈ ಕುರಿತಂತೆ ಸರ್ಕಾರವು ರಾಜ್ಯಾದ್ಯಂತ ಪ್ರಸ್ತುತ ಬೀಸುತ್ತಿರುವ ತೀವ್ರ ಶೀತಗಾಳಿಯು ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದಿದೆ.
ಆದ್ದರಿಂದ ಶೀತಗಾಳಿಯಿಂದಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕರು ರಾಜ್ಯ/ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಈ ಕೆಳಗಿನಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಳ್ಳಲು ತಿಳಿಸಿದೆ.
ಈ ಸಲಹೆಗಳನ್ನು ತಪ್ಪದೇ ಪಾಲಿಸಿ
ಬೆಚ್ಚಗಿರಿ
- ದಪ್ಪನಾದ ಒಂದೇ ಬಟ್ಟೆಯ ಬದಲಿಗೆ, ಹಲವು ಪದರಗಳ ಸಡಿಲವಾದ, ಹಗುರವಾದ, ಉಣ್ಣೆಯ ಬಟ್ಟೆಗಳನ್ನು ಧರಿಸಿ.
- ಕೈಕಾಲುಗಳನ್ನು ಸಂಪೂರ್ಣವಾಗಿ ಮುಚ್ಚಿ: ಟೋಪಿ/ಮಫ್ಲರ್ (ದೇಹದ ಮುಖ್ಯ ಶಾಖ ತಲೆಯ ಮೂಲಕ ನಷ್ಟವಾಗುತ್ತದೆ), ಬೆಚ್ಚಗಿನ ಕಾಲುಚೀಲಗಳು ಮತ್ತು ಜಲನಿರೋಧಕ (waterproof) ಶೂಗಳನ್ನು ಬಳಸಿ.
ಆಹಾರ ಮತ್ತು ನೀರು
- ದೇಹವನ್ನು ಹೈಡ್ರೆಟ್ ಆಗಿಡಲು ಬೆಚ್ಚಗಿನ ದ್ರವಗಳನ್ನು (ನೀರು, ಗಿಡಮೂಲಿಕೆ ಚಹಾ ಮತ್ತು ಸೂಪ್ ಇತ್ಯಾದಿ) ನಿಯಮಿತವಾಗಿ ಕುಡಿಯಿರಿ, ಬಾಯಾರಿಕೆಗಾಗಿ ಕಾಯಬೇಡಿ.
- ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಮತ್ತು ದೇಹದ ಶಾಖವನ್ನು ಹೆಚ್ಚಿಸಲು ವಿಟಮಿನ್-ಸಿ ಸಮ್ರದ ಹಣ್ಣುಗಳು ಮತ್ತು ತರಕಾರಿಗಳಂತಹ ಆರೋಗ್ಯಕರ ಆಹಾರಗಳನ್ನು ಸೇವಿಸಿ.
ಆಶ್ರಯ ಮತ್ತು ಸುರಕ್ಷತೆ
- ಸಾಧ್ಯವಾದಷ್ಟು ಮನೆಯೊಳಗೆ ಇರಿ, ವಿಶೇಷವಾಗಿ ಹೆಚ್ಚು ಚಳಿಯಿರುವಸಮಯದಲ್ಲಿ (ಬೆಳಗಿನ ಜಾವ ಮತ್ತುತಡರಾತ್ರಿ)
- ದುರ್ಬಲರ ಬಗ್ಗೆ ಗಮನ ಕೊಡಿ. ವೃದ್ಧರು, ಮಕ್ಕಳು ಮತ್ತು ಶಿಶುಗಳು ಸಾಕಷ್ಟು ಬೆಚ್ಚಗಿರಲು ನಿಯಮಿತವಾಗಿ ಅವರನ್ನು ಪರಿಶೀಲಿಸಿ.
ಆರೋಗ್ಯ ಅರಿವು
- ಹೈಪೋ ಥ ರ್ಮಿಯಾ (ನಡುಕ, ಗೊಂದಲ, ತೊದಲುವಮಾತು) ಮತ್ತು ಫ್ರಾಸ್ಟ್ ಬೈಟ್ (ನಿಶೇಷತೆ, ಬಿಳಿ ಅಥವಾ ಮೇಣದಂತಹ ಚರ್ಮ) ನಂತಹ ಚಳಿ-ಸಂಬಂಧಿತ ಕಾಯಿಲೆಗಳ ಲಕ್ಷಣಗಳನ್ನು ತಿಳಿದುಕೊಳ್ಳಿ.
- ಚಳಿ ಮತ್ತು ಒಣಗಾಳಿಯಿಂದ ಚರ್ಮಬಿರುಕು ಬಿಡುವುದನ್ನು ತಡೆಯಲು ಎಣ್ಣೆ, ಪೆಟ್ರೋಲಿಯಂಜೆಲ್ಲಿ ಅಥವಾ ಕ್ರೀಮ್‌ನಿಂದ ನಿಯಮಿತವಾಗಿ ಚರ್ಮವನ್ನು ತೇವಗೊಳಿಸಿ.
- ದೂರದರ್ಶನ, ರೇಡಿಯೋ ಅಥವಾ ಪತ್ರಿಕೆಗಳ ಮೂಲಕ ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ದೈನಂದಿನ ಹವಾಮಾನ ಮಾಹಿತಿಯನ್ನು ಗಮನಿಸಿ.
ಶೀತಗಾಳಿಯ ವೇಳೆ ಏನು ಮಾಡಬಾರದು (The DON’Ts): ತಪ್ಪಿಸ ಬೇಕಾದ ನಿರ್ದಿಷ್ಟ ಕ್ರಮಗಳು
ಆರೋಗ್ಯ ಅಪಾಯಗಳು
- ಮದ್ಯಪಾನ ಮಾಡಬೇಡಿ. ಇದು ಬೆಚ್ಚಗಿನ ಭಾವನೆಯನ್ನು ನೀಡುತ್ತದೆ ಎಂಬುದು ಸುಳ್ಳು. ಆದರೆ ವಾಸ್ತವವಾಗಿ ನಿಮ್ಮ ದೇಹದ ಮುಖ್ಯ ತಾಪಮಾನವನ್ನು ಕಡಿಮೆ ಮಾಡುತ್ತದೆ. ಹೈಪೋಥರ್ಮಿಯಾದ ಅಪಾಯವನ್ನು ಹೆಚ್ಚಿಸುತ್ತದೆ.
- ನಡುಕವನ್ನು ನಿರ್ಲಕ್ಷಿಸಬೇಡಿ. ಇದು ನಿಮ್ಮ ದೇಹವು ಶಾಖವನ್ನು ಕಳೆದುಕೊಳ್ಳುತ್ತಿದೆ ಎಂಬುದರ ಮೊದಲ ಚಿಹ್ನೆ, ತಕ್ಷಣ ಮನೆಯೊಳಗೆ ಹೋಗಿ.
ಫ್ರಾಸ್ಟ್ ಬೈಟ್ ಆರೈಕೆ
- ಫ್ರಾಸ್ಟ್ ಬೈಟ್ ಅಥವಾ ಚಳಿಯಿಂದ ಮರಗಟ್ಟಿದ ಚರ್ಮದ ಪ್ರದೇಶವನ್ನು ಉಜ್ಜಬೇಡಿ ಅಥವಾ ಮಸಾಜ್ಞಾಡಬೇಡಿ. ಇದು ತೀವ್ರವಾದ ಅಂಗಾಂಶ ಹಾನಿಯನ್ನು ಉಂಟುಮಾಡಬಹುದು.
- ಫ್ರಾಸ್ಟ್ ಬೈಟ್ ಆದಚರ್ಮವನ್ನು ಬೆಚ್ಚಗಾಗಿಸಲು ನೇರವಾದ, ತೀವ್ರವಾದ ಶಾಖವನ್ನು (ಹೀಟಿಂಗ್ಸ್‌ಾಡ್, ಬೆಂಕಿ ಅಥವಾ ಬಿಸಿನೀರು ಬಳಸಬೇಡಿ, ಏಕೆಂದರೆ ನಿಶ್ಲೇಷಗೊಂಡ ಪ್ರದೇಶವು ಸುಲಭವಾಗಿ ಸುಟ್ಟು ಹೋಗಬಹುದು.
ಒಳಾಂಗಣ ಸುರಕ್ಷತೆ
- ಗಾಳಿಯಿಲ್ಲದ ಮುಚ್ಚಿದ ಕೋಣೆಯಲ್ಲಿ ಕಲ್ಲಿದ್ದಲು, ಕಟ್ಟಿಗೆ ಅಥವಾ ಕ್ಯಾಂಡಲ್‌ಗಳನ್ನು ಉರಿಸಬೇಡಿ. ಇದು ಮಾರಣಾಂತಿಕ ಕಾರ್ಬನ್ಮಾನಾಷಕ್ಕೆ
ಕಾರಣವಾಗಬಹುದು. - ಬೆಂಕಿ ಅಥವಾ ತಾಪನ ಸಾಧನವನ್ನು ಗಮನಿಸದೆ ಬಿಡಬೇಡಿ.
ಹೊರಾಂಗಣ ಚಟುವಟಿಕೆ
- ಹೆಚ್ಚು ದೈಹಿಕ ಶ್ರಮ ಮಾಡಬೇಡಿ (ಉದಾಹರಣೆಗೆ, ತೀವವಾದ ಹೊರಾಂಗಣ ಕೆಲಸ) ಹೆಚ್ಚು ಬೆವರುವಿಕೆಯು ನಿಮ್ಮ ಬಟ್ಟೆಗಳನ್ನು ಒದ್ದೆ ಮಾಡಿ ವೇಗವಾಗಿ ತಣ್ಣಗಾಗಲು ಕಾರಣವಾಗಬಹುದು.
ವರದಿ; ವಸಂತ ಬಿ ಈಶ್ವರಗೆರೆ… ಸಂಪಾದಕರು…
ಈ ಹೋಟೆಲ್ ‘ನಾನ್ ವೆಜ್’ ಊಟದ ರುಚಿಗೆ 5*, 4*, 3* ಹೋಟೆಲ್ ಸರಿ ಸಾಟಿಯೇ ಇಲ್ಲ!








