ಮಂಡ್ಯ : ಮದ್ದೂರು ಪಟ್ಟಣದಲ್ಲಿ ಡಿಪ್ಲೋಮಾ ಮತ್ತು ಕಾನೂನು ಕಾಲೇಜಿಗೆ ಮುಂದಿನ ಬಜೆಟ್ ನಲ್ಲಿ ಅನುಮೋದನೆ ದೊರೆಕುವ ಸಂಭವವಿದೆ ಎಂದು ಶಾಸಕ ಕೆ.ಎಂ.ಉದಯ್ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು.
ಮದ್ದೂರು ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಒಂದು ಕೋಟಿ ರೂ ವೆಚ್ಚದಲ್ಲಿ ಹೆಚ್ಚುವರಿ ತರಗತಿಗಳ ಕೊಠಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಖಾಸಗಿ ಶಾಲಾ ಕಾಲೇಜುಗಳಿಗೆ ದುಬಾರಿ ಶುಲ್ಕ ತೆತ್ತು ವಿದ್ಯಾಭ್ಯಾಸ ಮಾಡುವುದು ಇಂದಿನ ದಿನಗಳಲ್ಲಿ ಕಷ್ಟಕರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ನೀಡುವ ಸೌಲಭ್ಯವನ್ನು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ನೀಡಿದರೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗಲಿದ್ದು, ಹೀಗಾಗಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
ಕೆಲ ದಿನಗಳ ಹಿಂದೆ ಮದ್ದೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮದ್ದೂರಿನಲ್ಲಿ ಡಿಪ್ಲೋಮಾ ಮತ್ತು ಕಾನೂನು ಕಾಲೇಜು ನಿರ್ಮಾಣ ಮಾಡಲು ಅನುದಾನ ನೀಡುವಂತೆ ಮನವಿ ಮಾಡಿದ್ದೆ. ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಬಜೆಟ್ ನಲ್ಲಿ ಅನುಮೋದನೆ ದೊರೆಕುವ ಸಾಧ್ಯತೆ ಇದೆ ಎಂದು ಭರವಸೆ ನೀಡಿದರು.
ಈಗಾಗಲೇ ಮಹಿಳಾ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ತೆರೆಯಲು ಸರ್ಕಾರಕ್ಕೆ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೀಗಾಗಿ ಅವಶ್ಯವಿರುವ ಹೆಚ್ಚುವರಿ ಕೊಠಡಿಗಳನ್ನು 5 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ಶಿಕ್ಷಣ ಕ್ಷೇತ್ರಕ್ಕೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರದಿಂದ ಹೆಚ್ಚಿನ ಅನುದಾನಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ. ವಿಧ್ಯಾರ್ಥಿಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ದೇಶಕ್ಕೆ ಕೊಡುಗೆಯಾಗಿ ಬೆಳೆಯಬೇಕು. ಶಾಲೆಯಲ್ಲಿ ಶ್ರದ್ದೆಯಿಂದ ಕಲಿತು ಪೋಷಕರಿಗೆ, ನಾಡಿಗೆ ಕೀರ್ತಿ ತರಬೇಕು ಎಂದು ಶಾಸಕ ಉದಯ್ ಕಿವಿಮಾತು ಹೇಳಿದರು.
ಇದೇ ವೇಳೆ ಪುರಸಭೆ ಅಧ್ಯಕ್ಷೆ ಕೋಕಿಲ ಅರುಣ್, ಸದಸ್ಯರಾದ ಸಿದ್ದರಾಜು, ಮೋಹನ್, ಗ್ರಾ.ಪಂ ಸದಸ್ಯ ಮಾದೇಶ್, ಬಸವರಾಜು ಪ್ರಾಂಶುಪಾಲ ನಾರಾಯಣ್ ಮುಖಂಡರಾದ ಜಯಂತಿ ಲಾಲ್ ಪಟೇಲ್, ಸಂತೋಷ್ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
BREAKING: ರಾಜ್ಯದ ‘1,275 ಸ್ಥಳ’ಗಳನ್ನು ‘ಪ್ರವಾಸಿ ತಾಣ’ಗಳಾಗಿ ಸರ್ಕಾರ ಘೋಷಣೆ
ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘144 ಗ್ರಾಮ ಆಡಳಿತಾಧಿಕಾರಿ’ ವರ್ಗಾವಣೆ | VA Transfer