ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು , ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಎಂಟು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೋಡಾಳ ಗ್ರಾಮದ ಬಳಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ.
ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕೆಕೆಆರ್ಟಿಸಿ ಬಸ್ ಪಲ್ಟಿ ಆಗಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಕೊಪ್ಪಳ ಜಿಲ್ಲೆಯ ಕುಕನೂರಿನಿಂದ ಈ ಒಂದು ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದ್ದು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








