ಮಂಗಳೂರು : ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಸಲುವಾಗಿ ನೇಮಕಾತಿ ಪ್ರಕ್ರಿಯೆ ತಡವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯತ್‌ರಾಜ್ ಇಲಾಖೆ ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ ಶೀಘ್ರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಕೆಇಎ ಮೂಲಕ ಮಾಡಿದ ನೇಮಕಾತಿ ಪೂರ್ಣವಾಗಿದ್ದು, ಕೆಪಿಎಸ್‌ನಿಂದಲೇ ಸಮಸ್ಯೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ನಮ್ಮಲ್ಲಿ ಕೆಪಿಎಸ್ ಇ ಇರುವ ತನಕ ಜನರಿಗೆ ಉದ್ಯೋಗ ಸಿಗಲ್ಲ. ಕೆಪಿಎಸ್‌ಇ ವಿಸರ್ಜನೆ ಮಾಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಕೊಟ್ಟಿದ್ದೇವೆ. 2.5 ಲಕ್ಷ ಖಾಲಿ ಹುದ್ದೆಗಳು ಇದ್ದು, ಸಾಂವಿಧಾನಿಕ ಸಂಸ್ಥೆ ಎನ್ನುವ ಕಾರಣಕ್ಕೆ ಹಸ್ತಕ್ಷೇಪ ಮಾಡಲು ಆಗುತ್ತಿಲ್ಲ. ಮುಂದೆ ಎಲ್ಲವೂ ಕೆಇಎಗೆ ನೀಡಲು ಯೋಚಿಸಿದ್ದೇವೆ ಎಂದು ತಿಳಿಸಿದರು.
ಪಿಡಿಒಗಳ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಪಾರದರ್ಶಕವಾಗಿ ಮಾಡಲಾಗಿದೆ. 12 ವರ್ಷಗಳಿಂದ ಬಾಕಿ ಉಳಿದಿರುವ ಸೀನಿಯರ್ ಪಿಡಿಒಗಳಿಒಗೆ ಬಡ್ತಿ ನೀಡುವ ವಿಚಾರ ಕೋರ್ಟ್‌ನಲ್ಲಿತ್ತು. ಅಫಿಡವಿಟ್ ಸಲ್ಲಿಕೆ ಮಾಡಿದ್ದು, ಕೋರ್ಟ್ ಆದೇಶದ ಬಳಿಕ ಬಡ್ತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.