BREAKING: ‘ಸರ್ಕಾರಿ ವೈದ್ಯ’ರು ಖಾಸಗಿ ಆಸ್ಪತ್ರೆಗಳಲ್ಲಿ ‘ಒಳರೋಗಿ’ಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ತಮ್ಮ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ(IPD) ಚಿಕಿತ್ಸೆ ನೀಡುವುದು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ, ಸರ್ಕಾರಿ ಆಸ್ಪತ್ರೆಗಳ ಸೇವಾ ಗುಣಮಟ್ಟವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ವಹಿಸಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಸೇವೆಯಲ್ಲಿ ವ್ಯತ್ಯಯದಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ … Continue reading BREAKING: ‘ಸರ್ಕಾರಿ ವೈದ್ಯ’ರು ಖಾಸಗಿ ಆಸ್ಪತ್ರೆಗಳಲ್ಲಿ ‘ಒಳರೋಗಿ’ಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್