ಬೆಂಗಳೂರು: ಇಂದು ಸರ್ಕಾರಿ ವೈಧ್ಯಾಧಿಕಾರಿಗಳ ಸಂಘದ ಪ್ರಮುಖರೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ, ಬೇಡಿಕೆ ಈಡೇರಿಕೆ ಬಗ್ಗೆ ಚರ್ಚೆ ನಡೆಸಿದರು. ಆದರೇ ಈ ಸಭೆಯಲ್ಲಿ ಮಾತುಕತೆ ವಿಫಲವಾಗಿದ್ದು, ನಿಗದಿಯಂತೆ ಮಾರ್ಚ್.11ರಂದು ಮುಷ್ಕರ ನಡಸಲಾಗುತ್ತಿದೆ ಎಂಬುದಾಗಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಸ್ಪಷ್ಟ ಪಡಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು, ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರು, ಅಧಿಕಾರಿ ನೌಕರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು ಎಂದಿದೆ.
ಇಂದಿನ ಸಭೆಯಲ್ಲಿ ಆರೋಗ್ಯ ಇಲಾಖೆಯ ಸರ್ಕಾರಿ ವೈದ್ಯರು, ನೌಕರರ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸುದೀರ್ಘವಾದಂತ ಚರ್ಚೆ ನಡೆಸಲಾಯಿತು. ಆದರೇ ಸಚಿವರು ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವ ಸ್ಪಷ್ಟವಾದಂತ ಭರವಸೆಯನ್ನು ನೀಡಿರುವುದಿಲ್ಲ ಎಂದು ಹೇಳಿದೆ.
ಈ ಹಿನ್ನಲೆಯಲ್ಲಿ ನಮ್ಮ ಸಂಘವು ಈ ಹಿಂದೆ ಕೈಗೊಂಡ ನಿರ್ಣಯದಂತೆ ಮಾರ್ಚ್.11ರಿಂದ ರಾಜ್ಯಾಧ್ಯಂತ ಸರ್ಕಾರಿ ವೈದ್ಯರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲಿದ್ದಾರೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದಾಗಿ ಕರ್ನಾಟಕ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್ ಎಂ ಮೇಟಿ ಸ್ಪಷ್ಟ ಪಡಿಸಿದ್ದಾರೆ.
ಈ ಎಲ್ಲದರ ಹಿನ್ನಲೆಯಲ್ಲಿ ಮಾರ್ಚ್.11ರಿಂದ ರಾಜ್ಯಾಧ್ಯಂತ ಸರ್ಕಾರಿ ವೈದ್ಯರು ಮುಷ್ಕರ ನಿರತರಾಗಲಿದ್ದು, ಆಸ್ಪತ್ರೆಗಳಲ್ಲಿ ತುರ್ತು ಸೇವೆ ಹೊರತು ಪಡಿಸಿ ಓಪಿಡಿ ಸೇವೆಯಲ್ಲಿ ಬರುತೇಕ ವ್ಯತ್ಯಯ ಉಂಟಾಗಲಿದೆ ಎಂಬುದಾಗಿಯೂ ಆರೋಗ್ಯ ಇಲಾಖೆಯ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ ಬಳ್ಳಾರಿ ಹೇಳಿದ್ದಾರೆ.
Liquid Jaggery: ಸಕ್ಕರೆಗಿಂತ 10 ಪಟ್ಟು ಶಕ್ತಿಶಾಲಿ ಈ ಜೋನಿ ಬೆಲ್ಲ; ಇದರ ಅದ್ಭುತ ಪ್ರಯೋಜನ ಏನು ಗೊತ್ತೇ?
BIG NEWS: ರಾಜ್ಯಾಧ್ಯಂತ ಇ-ಸ್ವತ್ತು ತಂತ್ರಾಂಶದಡಿ 1,14,907 ಅರ್ಜಿಗಳನ್ನು ಅನುಮೋದನೆ








