Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT: ರಾಜ್ಯದಲ್ಲಿ ಖಾಲಿ ಇರುವ ‘600 ಸ್ಟಾಫ್ ನರ್ಸ್ ಹುದ್ದೆ’ಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್
KARNATAKA

JOB ALERT: ರಾಜ್ಯದಲ್ಲಿ ಖಾಲಿ ಇರುವ ‘600 ಸ್ಟಾಫ್ ನರ್ಸ್ ಹುದ್ದೆ’ಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 600 ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಒಂದು ಸಾರ್ವಜನಿಕ ಸೇವಾ ನಿರತ ಇಲಾಖೆಯಾಗಿದ್ದು, ಶುಶೂಷಾಧಿಕಾರಿ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ವೃಂದದ ಅರೆ ವೈದ್ಯಕೀಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿಯನ್ನು ಕೋರುತ್ತಾ, ನೇರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ.

ಆಯುಕ್ತಾಲಯದ ದಿನಾಂಕ: 01/09/2023ರ ಪುಸ್ತಾವನೆಗೆ ಸಂಬಂಧಿಸಿದಂತೆ ಮೇಲೆ ಓದಲಾದ ಕ್ರಮಾಂಕ(2)ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹಾಗೂ 300 ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ಕೆಲವೊಂದು ಷರತ್ತಿಗೊಳಪಟ್ಟು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಸರ್ಕಾರವು ಅನುಮತಿ ನೀಡಿ ಆದೇಶಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಎದುರಾಗಿ 400 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ 400 ಫಾರ್ಮಸಿಸ್ಟ್ ಹುದ್ದೆಗಳನ್ನು ಕೆಲವೊಂದು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಮಾತ್ರ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿ ಆದೇಶಿಸಲಾಗಿದೆ.

ಮುಂದುವರೆದು, ಸಾರ್ವಜನಿಕರಿಗೆ/ಜನ ಸಮುದಾಯಕ್ಕೆ ಉತ್ತಮ ಆರೋಗ್ಯ ಸೇವೆಯನ್ನು ಸಕಾಲದಲ್ಲಿ ನೀಡಲು ಅನುಕೂಲವಾಗುವಂತೆ ಇಲಾಖೆಯಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಶುಶೂಷಾಧಿಕಾರಿ ವೃಂದದಲ್ಲಿನ ತೀವು ಅಗತ್ಯವಿರುವ ಖಾಲಿ ಸ್ಥಾನ/ ಹುದ್ದೆಗಳನ್ನು ಆದ್ಯತೆ ಮೇಲೆ ಭರ್ತಿ ಮಾಡಲು ಇಲಾಖೆಯಲ್ಲಿ ಖಾಲಿ ಇರುವ ಶುಶೂಷಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಲ್ಲಿ, ತಗಲುವ ಆರ್ಥಿಕ ವೆಚ್ಚದ ವಿವರವನ್ನು ಈ ಕೆಳಕಂಡಂತೆ ಆಯುಕ್ತಾಲಯದಿಂದ ಮಾಹಿತಿ ಸ್ವೀಕರಿಸಲಾಗಿದ್ದು, ಸದರಿ ವೆಚ್ಚವನ್ನು ರಾಜ್ಯ ವಲಯದ ಲೆಕ್ಕಶೀರ್ಷಿಕೆ: 2210-01-110-1-22 ರ ಉಪಲೆಕ್ಕ ಶೀರ್ಷಿಕೆ:034 (ಗುತ್ತಿಗೆ/ ಹೊರಗುತ್ತಿಗೆ) ಅಡಿ ಭರಿಸಬಹುದಾಗಿದೆ ಎಂದು ಸಹ ತಿಳಿಸಿರುತ್ತಾರೆ.

ಹೀಗಿದೆ ವೇತನ ಪಾವತಿ ವಿವರ

  • ಬೇಸಿಕ್ ಹಾಗೂ ವಿಡಿಎ – ರೂ.17,435
  • ಇಪಿಎಫ್ ಶೇ.13 – ರೂ.2,267
  • ಇಎಸ್ಐ ಶೇ.3.25 – ರೂ.567
  • ಒಟ್ಟು ರೂ.20,268
  • ಇದರಲ್ಲಿ ಸರ್ವಿಸ್ ಚಾರ್ಜ್ ರೂ.405 ಕಡಿತವಾಗಿ ರೂ.20,674 ನಿಗದಿಪಡಿಸಿದೆ.
  • ಶೇ.18ರಷ್ಟು ಜಿಎಸ್ಟಿ – ರೂ.3,721.
  • ಸ್ಟಾಫ್ ನರ್ಸ್ ಒಟ್ಟು ವೇತನ ರೂ.24,395

ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ 600 ಶುಶೂಷಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ನಿರ್ಧರಿಸಿದ್ದು, ಅದರಂತೆ ಈ ಕೆಳಕಂಡ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 600 ಶುಶೂಷಾಧಿಕಾರಿ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಪಡೆಯಲು ಸರ್ಕಾರವು ಅನುಮತಿ ನೀಡಿ ಆದೇಶಿಸಿದೆ.

1. ಇಲಾಖೆಯಲ್ಲಿ ನೇರ ನೇಮಕಾತಿ ಮುಖಾಂತರ ಶುಶೂಷಾಧಿಕಾರಿ ಹುದ್ದೆಗಳು ಭರ್ತಿಯಾದ ನಂತರ 600 ಶುಶೂಷಾಧಿಕಾರಿ ಹುದ್ದೆಗಳ ಗುತ್ತಿಗೆ ಸೇವೆಯನ್ನು ರದ್ದುಗೊಳಿಸತಕ್ಕದ್ದು. 2. ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳುವಾಗ ಭವಿಷ್ಯದ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನಿನ ತೊಡಕುಗಳು ಉದ್ಭವಿಸದಂತೆ ಕ್ರಮವಹಿಸತಕ್ಕದ್ದು.

3. ಗುತ್ತಿಗೆ ಆಧಾರದ ಮೇಲಿನ ಸಿಬ್ಬಂದಿಗಳ ಆಯ್ಕೆಯನ್ನು ಈ ಹಿಂದಿನ ಗುತ್ತಿಗೆ ಅವಧಿಯ ಸೇವೆಯನ್ನು ಪರಿಗಣಿಸದೆ, ಮತ್ತೆ ಹೊಸದಾಗಿ ಸೇವೆಗೆ ಸೇರಿಸಿಕೊಂಡಂತೆ ಪರಿಗಣಿಸಿ ಆಯ್ಕೆ (The Recruitment Should be done De-novo, without considering the pre-service of contract employees, as per extant C/R rules.) 4. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರು ಶುಶೂಷಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಪೂರ್ವದಲ್ಲಿ ಜಿಲ್ಲಾವಾರು ಮತ್ತು ಸಿಬ್ಬಂದಿಗಳ ಕೊರತೆ ಇರುವ ಕೇಂದ್ರಗಳ ಮತ್ತು ಜಿಲ್ಲಾವಾರು ಮಾಹಿತಿಯನ್ನು ಮತ್ತು ಯಾವ ಜಿಲ್ಲೆ ಮತ್ತು ಕೇಂದ್ರಗಳಿಗೆ ಪಸ್ತಾಪಿತ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತುಂಬುವ ಅವಶ್ಯಕತೆ ಇದೆ ಎಂಬುದರ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 577 ವೆಚ್ಚ-5/2025, ದಿನಾಂಕ: 19/09/2025 ರಲ್ಲಿ ನೀಡಿರುವ ಸಹಮತಿಯಂತೆ ಹೊರಡಿಸಿದೆ ಎಂದು ಹೇಳಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

Share. Facebook Twitter LinkedIn WhatsApp Email

Related Posts

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

1 Min Read

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read
Recent News

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.