ಬೆಂಗಳೂರು: ರಾಜ್ಯದ ಕಾರಾಗೃಹದಲ್ಲಿ ಖಾಲಿ ಇರುವಂತ ವಾರ್ಡರ್, ಇನ್ ಸ್ಟ್ರಕ್ಟರ್ ಸೇರಿದಂತೆ ವಿವಿಧ 1,222 ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಒಂದೇ ಕಡೆ ಐದು ವರ್ಷ ಕಾರ್ಯನಿರ್ವಹಿಸಿದ ಕಾರಾಗೃಹ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಲಾಗುವುದು. ಕಾರಾಗೃಹಗಳಲ್ಲಿ ಸಿಬ್ಬಂದಿ ಕೊರತೆ ಇದೆ ಎಂಬ ಸಬೂಬು ಹೇಳುತ್ತಿದ್ದಾರೆ. 197 ವಾರ್ಡರ್, 22 ಇನ್‌ಸ್ಟ್ರಕ್ಟರ್, 3 ಜನ ಅಸಿಸ್ಟೆಂಟ್ ಸೂಪರಿಡೆಂಟ್ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿದೆ. 983 ವಾರ್ಡರ್, 17 ಜನ ಜೈಲರ್ಸ್‌ಗಳ ನೇಮಕಾತಿಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಹೈಪವರ್ ಕಮಿಟಿ ರಚನೆ
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 5000 ಕೈದಿಗಳಿದ್ದಾರೆ. ಅಂಡರ್ ಟ್ರಯಲ್ಸ್, ಸಜಾ ಕೈದಿಗಳಿದ್ದಾರೆ. ಬೇರೆಬೇರೆ ಬ್ಯಾರಕ್‌ಗಳಲ್ಲಿ ಇದ್ದಾರೆ. ಈ ಕಾರಾಗೃಹದಲ್ಲಿ ಸೆಲಿಬ್ರಿಟಿಗಳು ಹೆಚ್ಚಿನ ಗಮನ ಈ ಕಾರಾಗೃಹದ ಮೇಲಿರುತ್ತದೆ. ಇಲ್ಲಿ ನಡೆದಿರುವ ಚಟುವಟಿಕೆಯನ್ನು ಗಮನದಲ್ಲಿಟ್ಟುಕೊಂಡು ಹೈಪವರ್ ಸಮಿತಿ ರಚನೆ ಮಾಡಿದ್ದೇವೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮಾತ್ರವಲ್ಲದೆ ರಾಜ್ಯದ ಎಲ್ಲ ಕಾರಾಗೃಹಗಳನ್ನು ಪರಿಶೀಲನೆ ಮಾಡಿ, ಸಮಗ್ರವಾದ ವರದಿಯನ್ನು ಕೊಡಬೇಕು. ಇದಕ್ಕೆ ಟರ್ಮ್ಶ್ ಆಫ್ ರೆಫರೆನ್ಸ್ ಕೊಡುತ್ತೇವೆ. ಈ ರೀತಿಯ ಘಟನೆಗಳಾಗುವುದು ಒಂದು ಭಾಗವಾದರೆ, ಸಿಸಿಟಿವಿ ಕೆಲಸ ಮಾಡದಿರುವುದು ಸೇರಿದಂತೆ ಎಲ್ಲ ರೀತಿಯ ಲೋಪಗಳ ಬಗ್ಗೆ ವರದಿಯಲ್ಲಿ ಕೊಡಬೇಕು ಎಂದು ಸಮಿತಿಗೆ ತಿಳಿಸಲಾಗುವುದು ಎಂದರು.
ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗುವುದು. ಐಜಿಪಿ ಸಂದೀಪ್ ಪಾಟೀಲ್, ಎಸ್‌ಪಿ ಅಮರನಾಥ್ ರೆಡ್ಡಿ, ಎಸ್‌ಪಿ ರಿಷ್ಯಾಂತ್ ಅವರಿಗೂ ಜವಾಬ್ದಾರಿ ಕೊಡುತ್ತೇವೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳು ಸಮಿತಿಯ ಸಹ ಸದಸ್ಯರಾಗಿರುತ್ತಾರೆ.
ಹೈಪವರ್ ಕಮಿಟಿ ನೀಡುವ ವರದಿ ಆಧರಿಸಿ ಘಟನೆಯಲ್ಲಿ ಯಾರೆಲ್ಲ ಭಾಗಿಯಾಗಿರುತ್ತಾರೆ, ಅವರನ್ನು ಸೇವೆಯಿಂದ ವಜಾ ಮಾಡುವ ಅಥವಾ ಅಮಾನತುಗೊಳಿಸುವ ಕ್ರಮ ತೆಗೆದುಕೊಳ್ಳಲಾಗುವುದು. ಒಂದು ತಿಂಗಳೊಳಗೆ ವರದಿ ನೀಡಬೇಕು ಎಂದು ಸೂಚಿಸಲಾಗಿದ್ದು, ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿನ ಘಟನೆಯ ಪ್ರಾಥಮಿಕ ಮಾಹಿತಿ ಅಧರಿಸಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ವಿವರಿಸಿದರು.
ಎಲ್ಲ ಎಲ್ಲ ಕಾರಾಗೃಹಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ರಾಜ್ಯದ ಎಲ್ಲ ಕಾರಾಗೃಹಗಳಲ್ಲಿನ ಚಟುವಟಿಕೆಗಳನ್ನು ಕಾರಾಗೃಹ ಪ್ರಧಾನ ಕಚೇರಿಯಿಂದ ನಿಗಾವಹಿಸಲು ಕಮಾಂಡ್ ಸೆಂಟರ್ ಸ್ಥಾಪಿಸಲಾಗುವುದು. ಹಿರಿಯ ಅಧಿಕಾರಿಗಳು, ಡಿಜಿ ಅಥವಾ ಎಡಿಜಿಪಿ ಕಾರಾಗೃಹ ಅವರು ನಿಗಾವಹಿಸುವ ವ್ಯವಸ್ಥೆಯನ್ನು ಮಾಡಲಾಗುವುದು. ಇದಕ್ಕೆ 15 ದಿನದೊಳಗೆ ಸಮಯ ನೀಡಲಾಗಿದೆ ಎಂದು ತಿಳಿಸಿದರು.
BREAKING: ಬ್ಯಾಂಕ್ ಖಾತೆಯಿಲ್ಲದೇ ‘ಮಕ್ಕಳು UPI ವರ್ಗಾವಣೆ’ಗೆ ಅನುಮೋದಿಸಿದ RBI | Junio Payments
ರಾಜ್ಯದ ಕಾರಾಗೃಹಗಳ ಪರಿಶೀಲನೆಗೆ ‘ಹೈ ಪವರ್ ಕಮಿಟಿ’ ರಚನೆ: ಗೃಹ ಸಚಿವ ಪರಮೇಶ್ವರ್ ಘೋಷಣೆ







