ಬೆಂಗಳೂರು: ನಗರದ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟದ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 2024ರ ಕಲಂ 241(7) ಅಡಿಯಲ್ಲಿ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ವಸತಿ ಕಟ್ಟಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC PIPE) on We♫ Bed Tazz USED WATER TREATMENT PLANT ಆವರಣದಲ್ಲಿರುವ ಸಂಸ್ಕರಿಸಿದ ನೀರಿನ ಪಂಪಿಂಗ್ ಸ್ಟೇಷನ್, ದೇವನಹಳ್ಳಿ ಬಳಿಯ ಐಟಿ ಪಾರ್ಕ್ ಕೈಗಾರಿಕಾ ಪ್ರದೇಶದಲ್ಲಿರುವ 40 ಎಂಎಲ್‌ಡಿ ಸಾಮರ್ಥ್ಯದ ತೃತೀಯ ಹಂತದ ಸಂಸ್ಕರಣಾ ಘಟಕದ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ರೂ.45.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದಿಸಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಎಲೆಮಲ್ಲಪ್ಪ ಚೆಟ್ಟಿಯಲ್ಲಿರುವ 15 ದ.ಲ.ಲೀ ಸಾಮರ್ಥ್ಯದ ತ್ಯಾಜ್ಯ ನೀರು ಶುದ್ದೀಕರಣ ಘಟಕವನ್ನು ಮತ್ತು ಸಾದರಮಂಗಲದಲ್ಲಿ 5 ದ.ಲ.ಲೀ ಸಾಮರ್ಥ್ಯದ ISPS (INTERMEDIATE SEWAGE PUMPING STATION) ಮತ್ತು ಸುಮಾರು 3.5 ಕಿ.ಮೀಗಳ 450MM DIA DI (DUCTILE IRON) ಪೈಪ್ ಲೈನ್ ನ 5 ವರ್ಷಗಳ ಸಮಗ್ರ ಕಾರ್ಯಚರಣೆ ಮತ್ತು ನಿರ್ವಹಣೆ (O&M)ಯನ್ನು ರೂ.19.07 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 90 ದ.ಲ.ಲೀ ಸಾಮರ್ಥ್ಯದ ಬೆಳ್ಳಂದೂರು ತ್ಯಾಜ್ಯ ನೀರು ಶುದ್ದೀಕರಣ ಘಟಕದ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.23.36 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಯನ್ನು ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ನೀಡಿದೆ.