Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ
KARNATAKA

ಕರ್ನಾಟಕದಲ್ಲಿ ಖಾಲಿ ಇರುವ 2.94 ಲಕ್ಷ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಿಲ್ಲ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಳವಳ

By ವಸಂತ ಬಿ ಈಶ್ವರಗೆರೆ

ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳನ್ನು ಭರ್ತಿ ಮಾಡದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು; ನಿರುದ್ಯೋಗಿ ಯುವಜನರ ಪ್ರತಿಭಟನೆಯನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಧಾರವಾಡದಲ್ಲಿ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳು ಬೀದಿಗೆ ಇಳಿದಿರುವುದನ್ನು ರಾಜ್ಯ ಸರಕಾರ ಲಘುವಾಗಿ ಪರಿಗಣಿಸಬಾರದು. ಸರಕಾರಿ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬದೇ ನಿರ್ಲಕ್ಷಿಸಿದ ಪರಿಣಾಮವೇ ಯುವಜನರು ಪ್ರತಿಭಟನೆ ದಾರಿ ತುಳಿಯಲು ಕಾರಣ ಎಂದಿದ್ದಾರೆ.

ಅಲ್ಲದೆ; ಯುವಜನರ ಪ್ರತಿಭಟನೆ ಶಾಂತಿಯುತವಾಗಿರಲಿ, ನಿಮ್ಮೊಂದಿಗೆ ನಾನಿದ್ದೇನೆ ಎಂದು ಸಚಿವರು ಬೆಂಬಲ ಸೂಚಿಸಿದ್ದಾರೆ.

ರಾಜ್ಯದಲ್ಲಿ 2.94 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಸಂಪುಟ ದರ್ಜೆ ಹುದ್ದೆಗಳು ಮಾತ್ರ ಸೂಪರ್‌‌ʼಫಾಸ್ಟ್ ಆಗಿ ಭರ್ತಿ ಆಗುತ್ತಿವೆ. ಕಾಂಗ್ರೆಸ್ ಸರಕಾರದ ಆದ್ಯತೆ ಯಾವ ರೀತಿಯಲ್ಲಿದೆ ಎಂಬುದು ಅರ್ಥವಾಗುತ್ತದೆ.‌ ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯ ಕರ್ನಾಟಕ ಆಡಳಿತ ಸುಧಾರಣೆ ಆಯೋಗದ ವರದಿಯಂತೆ ರಾಜ್ಯದಲ್ಲಿ 7 ಲಕ್ಷ ನಿರುದ್ಯೋಗಿಗಳಿದ್ದಾರೆ. ಇವರೆಲ್ಲರೂ ಸರಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದು, ಖಾಲಿ ಹುದ್ದೆಗಳನ್ನು ಸರಕಾರ ಹಂತ ಹಂತವಾಗಿ ಭರ್ತಿ ಮಾಡಬೇಕಿತ್ತು. ಕುರ್ಚಿ ತಿಕ್ಕಾಟದಲ್ಲಿ ಅಮೂಲ್ಯವಾದ 3 ವರ್ಷಗಳನ್ನು ಪೋಲು ಮಾಡಿದೆ. ಯುವಜನರತ್ತ ಗಮನ ಹರಿಸಲು ಈ ಸರಕಾರಕ್ಕೆ ಟೈಮಿಲ್ಲ! ಎಂದು ಕಟುವಾಗಿ ಟೀಕಿಸಿದ್ದಾರೆ.

ನಿರುದ್ಯೋಗ ಸದಾ ಕುದಿಯುವ ಜ್ವಾಲಾಮುಖಿ:

ನಿರುದ್ಯೋಗ ಎನ್ನುವುದು ಸರಳ ಸಮಸ್ಯೆ ಅಲ್ಲ. ಅದು ಸದಾ ಕುದಿಯುವ ಜ್ವಾಲಾಮುಖಿ ಎಂಬುದನ್ನು ಸರಕಾರ ಮರೆಯಬಾರದು. ಈ ಹೊತ್ತಿಗೇ ಆಡಳಿಗಾರರು ಎಚ್ಚೆತ್ತು ಬಜೆಟ್‌ನಲ್ಲಿ ಪ್ರತ್ಯೇಕ ಹಣ ಇರಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕಿತ್ತು. ಅತಿ ಹೆಚ್ಚು ಹುದ್ದೆಗಳು ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲಿ ಖಾಲಿ ಇವೆ. ಬೆಂಗಳೂರು ನಗರದ 18 ಆಯಕಟ್ಟಿನ ಪೊಲೀಸ್‌ ಠಾಣೆಗಳಲ್ಲಿ ಇನ್‌ʼಸ್ಪೆಕ್ಟರ್‌ʼಗಳೇ ಇಲ್ಲ! ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗಿದ್ದರ ಪರಿಣಾಮವಿದು ಎಂದು ಕುಮಾರಸ್ವಾಮಿ ದೂರಿದ್ದಾರೆ.

ಈ ಎಲ್ಲಾ ಕಾರಣಗಳು ಆಡಳಿತದ ಮೇಲೆ ನೇರವಾಗಿ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಕೂಡಲೇ ಖಾಲಿ ಹುದ್ದೆಗಳ ಭರ್ತಿ ಮಾಡುವ ನಿಟ್ಟಿನಲ್ಲಿ ಸರಕಾರ ತುರ್ತು ಕ್ರಮ ವಹಿಸಬೇಕು. ವಿಧಾನಸೌಧದ 3ನೇ ಮಹಿಡಿಯಿಂದ ಕೆಳಗಿಳಿದು ಬಂದು ಯುವಜನರ ದನಿ ಆಲಿಸಬೇಕು. ಇಲ್ಲವಾದರೆ, ಇವರ ಆಕ್ರೋಶಕ್ಕೆ ಕಾಂಗ್ರೆಸ್‌ ಸರಕಾರ ಬೆಲೆ ತೆರಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.